ಸಂಸ್ಕೃತ ರಾಷ್ಟ್ರೀಯ ಭಾಷೆಯಾಗಲಿ : ಕಂಗನಾ ರಣಾವತ್
ಸಿನಿರಂಗದಲ್ಲಿ ಉತ್ತರ ಭಾರತ ಮತ್ತು ದಕ್ಷಿಣ ಭಾರತದ ತಾರೆಗಳ ಮಧ್ಯೆ ಹಿಂದಿ ಭಾಷೆ ರಾಷ್ಟ್ರೀಯ ಭಾಷೆ ಎಂಬ ವಿಚಾರಕ್ಕೆ ವಾಕ್ಸಮರ್ ನಡೆಯುತ್ತಿದೆ. ಹಿಂದಿ ಭಾಷೆ ರಾಷ್ಟ್ರೀಯ ಭಾಷೆ ಎಂದು ಬಾಲಿವುಡ್ ನ ನಾಯಕರು ಹೇಳುತ್ತಿದ್ದರೇ, ಇತ್ತ ದಕ್ಷಿಣ ಭಾರತದ ಸಿನಿಮಾ ಮಂದಿ ಹಿಂದಿ ಭಾಷೆ ರಾಷ್ಟ್ರೀಯ ಭಾಷೆಯಲ್ಲ ಅದು ಪ್ರಾದೇಶಿಕ ಭಾಷೆ ಎಂದು ಸಮರ್ಥಿಸಿಕೊಂಡಿದ್ದಾರೆ.
ಈ ಮಧ್ಯೆ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕಂಗನಾ ರಣಾವತ್, ಇವತ್ತು ರಾಷ್ಟ್ರ ಭಾಷೆಯ ಕಾರಣಕ್ಕಾಗಿ ಸುದ್ದಿಯಾಗಿದ್ದಾರೆ. ಬಾಲಿವುಡ್ ನಟ ಅಜಯ್ ದೇವಗನ್ ‘ಹಿಂದಿ ರಾಷ್ಟ್ರ ಭಾಷೆ’ ಎಂದು ದಕ್ಷಿಣ ಭಾರತದವರ ಪಾಲಿಗೆ ವಿಲನ್ ಆಗಿದ್ದಾರೆ. ಕಂಗನಾ ಕೂಡ ಅಜಯ್ ದೇವಗನ್ ಮಾತಿಗೆ ಅನುಮೋದನೆ ನೀಡುವುದಷ್ಟೇ ಅಲ್ಲದೇ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದಾರೆ.
ಹಿಂದಿ ರಾಷ್ಟ್ರ ಭಾಷೆ ಎಂದು ಅಜಯ್ ದೇವಗನ್ ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ. ಆದರೆ, ನಾವು ಇನ್ನೂ ಆಳವಾಗಿ ಯೋಚಿಸಬೇಕಿದೆ. ಹಿಂದಿ, ಫ್ರೆಂಚ್ ಸೇರಿದಂತೆ ಹಲವು ಭಾಷೆಗಳ ಉಗಮಕ್ಕೆ ಸಂಸ್ಕೃತ ಕಾರಣ. ಹಾಗಾಗಿ ಸಂಸ್ಕೃತ ಭಾಷೆಯನ್ನೇ ರಾಷ್ಟ್ರ ಭಾಷೆಯನ್ನಾಗಿ ಮಾಡಬೇಕು. ಕಡ್ಡಾಯವಾಗಿ ಅದನ್ನು ಶಾಲೆಯಲ್ಲಿ ಕಲಿಸಬೇಕು ಎಂದು ಹೇಳಿದ್ದಾರೆ.
ಇಂಗ್ಲಿಷ್ ಅನ್ನು ಸಂಪರ್ಕ ಭಾಷೆಯನ್ನಾಗಿ ಪರಿಗಣಿಸಬೇಕು ಎಂದು ಹೇಳುತ್ತಾರೆ. ಅದರ ಅಗತ್ಯವಿಲ್ಲ. ಪ್ರಾದೇಶಿಕ ಭಾಷೆಗಳನ್ನೇಕೆ ಸಂಪರ್ಕ ಭಾಷೆಯನ್ನಾಗಿ ಇಟ್ಟುಕೊಳ್ಳುಬಾರದು ಎಂದು ಪ್ರಶ್ನಿಸಿದ್ದಾರೆ.









