ಬೆಂಗಳೂರು: ರಾಜ್ಯ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ. ಈ ಪೈಕಿ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಗ್ಯಾರಂಟಿ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗಿದೆ. ಆದರೆ, ಅರ್ಜಿ ಸಲ್ಲಿಸುವ ಮುನ್ನ ಸೈಬರ್ ಖದೀಮರಿಂದ ಎಚ್ಚರವಾಗಿರಿ ಎದು ಸೈಬರ್ ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಕಳ್ಳತನ ಮಾಡಲು ಸೈಬರು ಕಳ್ಳರು ಕಾಯುತ್ತಿದ್ದಾರೆ ಎಂದು ಸೈಬರ್ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಗ್ಯಾರಂಟಿಗೆ ಅರ್ಜಿ ಸಲ್ಲಿಕೆ ಮಾಡುವ ಮುನ್ನಾ ಎಚ್ಚರವಾಗಿರಿ. ಅರ್ಜಿ ಸಲ್ಲಿಕೆಗೆ ಸೇವಾಸಿಂಧು ಪೋರ್ಟಲ್ ಇದೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೈಬರ್ ಕಳ್ಳರು, ಈಗ ಫೇಕ್ ಲಿಂಕ್‌ಗಳನ್ನು ಹರಿ ಬಿಡುತ್ತಿದ್ದಾರೆ. ಈ ಲಿಂಕ್ ಕ್ಲಿಕ್ ಮಾಡಿ, ಬ್ಯಾಂಕ್ ಖಾತೆ ವಿವರಗಳನ್ನು ನೀಡಿದರೆ, ಬ್ಯಾಂಕ್‌ನಲ್ಲಿರುವ ದುಡ್ಡು ಸೈಬರ್ ಚೋರರ ಪಾಲಾಗುವುದು ಖಚಿತ ಎನ್ನಲಾಗುತ್ತಿದೆ.
ಹೀಗಾಗಿ ಅರ್ಜಿದಾರರು ತುಂಬಾ ಎಚ್ಚರಿಕೆಯಿಂದ ಲಿಂಕ್ ಗಳನ್ನು ಓಪನ್ ಮಾಡಿ ಅರ್ಜಿ ಸಲ್ಲಿಸಬೇಕು. ಸರ್ಕಾರ ಕೂಡ ಈ ವಿಚಾರದಲ್ಲಿ ವ್ಯಾಪಕ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕು. ಇಲ್ಲದಿದ್ದರೆ ಜನರಿಗೆ ತೊಂದರೆಯಾಗುತ್ತದೆ ಎಂದು ಸೈಬರ್ ತಜ್ಞರು ಎಚ್ಚರಿಕೆ ನೀಡಿದ್ದಾರೆ.








