ಬೆಂಗಳೂರಿನ ಬಾಣಸವಾಡಿ ಠಾಣೆಯ ಪೊಲೀಸರು ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಮಡಿವಾಳ, ಬಾಣಸವಾಡಿ, ಕಮರ್ಷಿಯಲ್ ಸ್ಟ್ರೀಟ್, ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿಯನ್ನು ಆನಂದ್ ಎಂದು ಗುರುತಿಸಲಾಗಿದೆ.
ಆರೋಪಿಯು 12 ಲಕ್ಷ ರೂ. ಮೌಲ್ಯದ 9 ದ್ವಿ ಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದಾನೆ ಎನ್ನಲಾಗಿದೆ. ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ. ಕದ್ದ ಬೈಕ್ ಗಳಿಂದ ವ್ಹೀಲಿಂಗ್ ಮಾಡಿ ಕಡಿಮೆ ಹಣಕ್ಕೆ ಮಾರಾಟ ಮಾಡುತ್ತಿದ್ದ. ಸುಲಭವಾಗಿ ಲಾಕ್ ಬ್ರೇಕ್ ಮಾಡಬಹುದು ಎಂಬ ಕಾರಣಕ್ಕೆ ಡಿಯೋ ಬೈಕ್ ಗಳನ್ನೇ ಹೆಚ್ಚಾಗಿ ಕಳ್ಳತನ ಮಾಡುತ್ತಿದ್ದೆ ಎಂದು ತಪ್ಪೊಪ್ಪಿಕೊಂಡಿದ್ದಾನೆ.








