Belagavi: ಇಬ್ಬರು ಗಾಂಜಾ ಪೆಡ್ಲರ್ ಗಳನ್ನು ಬಂಧಿಸಿದ ಬೆಳಗಾವಿ ಸಿಸಿಬಿ ಪೊಲೀಸರು

1 min read
Belagavi Saaksha Tv

ಇಬ್ಬರು ಗಾಂಜಾ ಪೆಡ್ಲರ್ ಗಳನ್ನು ಬಂಧಿಸಿದ ಬೆಳಗಾವಿ ಸಿಸಿಬಿ ಪೊಲೀಸರು

ಬೆಳಗಾವಿ : ಬೆಳಗಾವಿ ಜಿಲ್ಲೆಯ ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚಾರಣೆಯಲ್ಲಿ ಇಬ್ಬರು ಅಂತರಾಜ್ಯ ಗಾಂಜಾ ಪೆಡ್ಲರ್ ಗಳು ಬಲೆಗೆ ಬಿದ್ದಿದ್ದಾರೆ.

ಮಹಾರಾಷ್ಟ್ರದ ಮೀರಜ್​ನ ಫಾರೂಖ್ ಖಾನ್ (37) ಹಾಗೂ ಅಮನ್ ಜಮಾದಾರ್(20) ಬಂಧಿತ ಆರೋಪಿಗಳು. ಇವರು ಮಹರಾಷ್ಟ್ರದಿಂದ ಕರ್ನಾಟಕಕ್ಕೆ ಗಾಂಜಾ ಸರಬರಾಜು ಮಾಡುತ್ತಿದ್ದರು.

ಬಂಧಿತ ಆರೋಪಿಗಳಿಂದ ಬಂಧಿತರಿಂದ 8 ಕೆಜಿ 300 ಗ್ರಾಂ ಗಾಂಜಾ ಮತ್ತು 2 ಲಕ್ಷ ರೂಪಾಯಿ ನಗದು ಹಾಗೂ ಒಂದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಿಗೆ ಈ ಆರೋಪಿಗಳು ಗಾಂಜಾ ಸರಬರಾಜು ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಬೆಳಗಾವಿ ನಗರದ ಹೊರ ವಲಯದಲ್ಲಿ ಇಬ್ಬರನ್ನ ಬಂಧಿಸಿದ್ದಾರೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd