ಇಬ್ಬರು ಗಾಂಜಾ ಪೆಡ್ಲರ್ ಗಳನ್ನು ಬಂಧಿಸಿದ ಬೆಳಗಾವಿ ಸಿಸಿಬಿ ಪೊಲೀಸರು
ಬೆಳಗಾವಿ : ಬೆಳಗಾವಿ ಜಿಲ್ಲೆಯ ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚಾರಣೆಯಲ್ಲಿ ಇಬ್ಬರು ಅಂತರಾಜ್ಯ ಗಾಂಜಾ ಪೆಡ್ಲರ್ ಗಳು ಬಲೆಗೆ ಬಿದ್ದಿದ್ದಾರೆ.
ಮಹಾರಾಷ್ಟ್ರದ ಮೀರಜ್ನ ಫಾರೂಖ್ ಖಾನ್ (37) ಹಾಗೂ ಅಮನ್ ಜಮಾದಾರ್(20) ಬಂಧಿತ ಆರೋಪಿಗಳು. ಇವರು ಮಹರಾಷ್ಟ್ರದಿಂದ ಕರ್ನಾಟಕಕ್ಕೆ ಗಾಂಜಾ ಸರಬರಾಜು ಮಾಡುತ್ತಿದ್ದರು.
ಬಂಧಿತ ಆರೋಪಿಗಳಿಂದ ಬಂಧಿತರಿಂದ 8 ಕೆಜಿ 300 ಗ್ರಾಂ ಗಾಂಜಾ ಮತ್ತು 2 ಲಕ್ಷ ರೂಪಾಯಿ ನಗದು ಹಾಗೂ ಒಂದು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಿಗೆ ಈ ಆರೋಪಿಗಳು ಗಾಂಜಾ ಸರಬರಾಜು ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಬೆಳಗಾವಿ ನಗರದ ಹೊರ ವಲಯದಲ್ಲಿ ಇಬ್ಬರನ್ನ ಬಂಧಿಸಿದ್ದಾರೆ.