ಬಳ್ಳಾರಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ (Ballari District Hospital) ಬಾಣಂತಿಯರ ಸಾವಿನ ಪ್ರಕರಣ ಏರಿಕೆಯಾಗುತ್ತಿದ್ದು, ಜನರ ಆಕ್ರೋಶ ಮುಗಿಲು ಮುಟ್ಟಿದೆ.
ಬಿಮ್ಸ್ ಆಸ್ಪತ್ರೆಯಲ್ಲಿ ಸಿಸೇರಿಯನ್ (Caesarean) ಮಾಡಿಸಿಕೊಂಡಿದ್ದ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. ಸುಮಯಾ (25) ಸಾವನ್ನಪ್ಪಿರುವ ಬಾಣಂತಿ. ಈ ಮೂಲಕ ಸಾವನ್ನಪ್ಪಿರುವ ಬಾಣಂತಿಯರ ಸಂಖ್ಯೆ 5ಕ್ಕೆ ಏರಿಕೆ ಕಂಡಿದೆ. ಇವರು ಕಳೆದ 23 ದಿನಗಳಿಂದ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಸಿಸೇರಿಯನ್ ಮಾಡಿಸಿಕೊಂಡ ನಂತರ ಮಹಿಳೆಯ ಆರೋಗ್ಯದಲ್ಲಿ ಏರುಪೇರಾಗಿತ್ತು. ನ. 12 ರಂದು ಸುಮಾಯ ಅವರನ್ನು ಬಿಮ್ಸ್ ಗೆ ದಾಖಲಿಸಲಾಗಿತ್ತು. ಕಿಡ್ನಿ ವೈಫಲ್ಯವಾಗಿ ಸತತ ಡಯಾಲಿಸಿಸ್ ಮಾಡಲಾಗ್ತಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.