ಬೆಳಗಾವಿ: ಸರ್ಕಾರದ ಬೇಜವಾಬ್ದಾರಿಯಿಂದಲೇ ರಾಜ್ಯದಲ್ಲಿ ಬಾಣಂತಿಯರು ಹಾಗೂ ಹಸುಗೂಸುಗಳು ಸಾವನ್ನಪ್ಪುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಬೆಳಗಾವಿಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರ ನಿದ್ದೆ ಮಾಡುತ್ತಿರುವುದರಿಂದಾಗಿ ಇಂತಹ ಅವಾಂತರಗಳು ನಡೆಯುತ್ತಿವೆ. ಬಾಣಂತಿಯರು, ಹಸುಗೂಸುಗಳು ಪ್ರಾಣ ಕಳೆದುಕೊಳ್ಳತ್ತಿದ್ದಾರೆ ಎಂದರೆ, ಅದು ಸಣ್ಣ ವಿಷಯವಲ್ಲ. ಇದರಿಂದ ಎಷ್ಟೋ ಕುಟುಂಬಗಳ ಬೀದಿಗೆ ಬರುತ್ತವೆ. ಎಷ್ಟೋ ಕುಟುಂಬಗಳ ಬದುಕು ಅಸ್ತವ್ಯಸ್ಥವಾಗುತ್ತದೆ.
ಎಷ್ಟೋ ಕುಟುಂಬಗಳು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗುತ್ತದೆ. ಆದರೆ, ಇದಕ್ಕೂ ನನಗೂ ಸಂಬಂಧವೇ ಇಲ್ಲ ಎನ್ನುವಂತೆ ಸರ್ಕಾರ ವರ್ತಿಸುತ್ತಿದೆ. ಈ ಸಾವಿನ ಕುರಿತು ನಾವು ಸದನದಲ್ಲಿ ಚರ್ಚಿಸುತ್ತೇವೆ. ಈ ಕುರಿತು ಗಮನ ಸೆಳೆಯುವ ಯತ್ನ ಮಾಡುತ್ತೇವೆ ಎಂದಿದ್ದಾರೆ.








