ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮೈಸೂರಿನಿಂದ ಮಂಗಳೂರಿಗೆ ಬಿಯರ್ ಸಾಗಿಸುತ್ತಿದ್ದ ಲಾರಿ ಮಗುಚಿ ಬಿದ್ದ ಘಟನೆ ಅರಂತೋಡು ಸಮೀಪದ ಕೊಡಂಕೇರಿಯಲ್ಲಿ ನಡೆದಿದೆ.
ಮಡಿಕೇರಿ ಕಡೆಯಿಂದ ಕಡಿದಾದ ರಸ್ತೆ ದಾಟಿ ಸುಗಮ ಮಾರ್ಗ ಸಿಗುತ್ತಿದ್ದಂತೆ ಬಿಯರ್ ತುಂಬಿದ್ದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಲಾರಿ ಚಾಲಕ ಮತ್ತು ಕ್ಲೀನರ್ ಕೂದಲೆಳೆ ಅಂತರದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಅಂದಾಜು 45 ಲಕ್ಷ ಮೌಲ್ಯದ ಬಿಯರ್ ಲಾರಿನಲ್ಲಿತ್ತು ಎನ್ನಲಾಗಿದೆ. ಲಾರಿ ಪಲ್ಟಿಯಾದ ಸುದ್ದಿ ತಿಳಿಯುತ್ತಲೇ ಸುತ್ತಮುತ್ತಲಿನ ಗ್ರಾಮಸ್ಥರು ಬಿಯರ್ ಗಾಗಿ ಮುಗಿ ಬಿದ್ದಿದ್ದರು. ತಕ್ಷಣವೇ ಪೋಲಿಸರು ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








