ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಶಿಕ್ಷಣ ತಜ್ಞರ ಜತೆ 3 ದಿನದ ಸರಣಿ ಸಭೆ ಆರಂಭ: ಶಾಲೆಗಳ ಆರಂಭಕ್ಕೆ ಸಿಗುತ್ತಾ ಗ್ರೀನ್‍ಸಿಗ್ನಲ್..?

Kariyappa N by Kariyappa N
November 4, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ನರ್ಸರಿ ಹಾಗೂ ಪ್ರಾಥಮಿಕ ಹಂತದಿಂದ ಶಾಲೆಗಳನ್ನು ಆರಂಭಿಸಬೇಕೇ ಬೇಡವೇ ಎಂಬುದರ ಗೊಂದಲಗಳ ಬಗ್ಗೆ ಚರ್ಚಿಸಿಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ನೇತೃತ್ವದಲ್ಲಿ ತಜ್ಞರ ಸಭೆ ಆರಂಭವಾಗಿದೆ.
ಇಂದಿನಿಂದ ಮೂರು ದಿನಗಳ ಶಿಕ್ಷಣ ತಜ್ಞರು, ಖಾಸಗಿ ಶಾಲೆಗಳು ಮುಖ್ಯಸ್ಥರು, ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಯೂ ಸರಣಿ ಸಭೆ ನಡೆಯಲಿದೆ. ಬೆಂಗಳೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಶಾಲೆ ಆರಂಭಿಸಬೇಕೇ, ಬೇಡವೇ ಎಂಬುದರ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ. 3 ದಿನಗಳ ಸಭೆ ಬಳಿಕ ನವೆಂಬರ್ 6ರಂದು ಸರ್ಕಾರ ಶಾಲೆ ಆರಂಭಿಸುವ ದಿನಾಂಕವನ್ನು ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.


ನಿನ್ನೆ ನಡೆಯಬೇಕಿದ್ದ ಸಭೆಯನ್ನು ಇಂದಿಗೆ ಮುಂದೂಡಿಕೆಯಾಗಿತ್ತು. ಅದರಂತೆ ಇಂದು ಬೆಳಗ್ಗೆ 11.30ಕ್ಕೆ ಸಭೆ ಆರಂಭವಾಗಿದೆ. ಈಗಾಗಲೇ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ನೇತೃತ್ವದಲ್ಲಿ ಎಲ್ಲಾ ಜಿಲ್ಲೆಗಳ ಡಿಡಿಪಿಐ, ಬಿಇಓಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಜಿಲ್ಲಾಗಳ ವಾಸ್ತವ ಪರಿಸ್ಥಿತಿ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ.

Related posts

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

March 29, 2026
ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

March 29, 2026

ಶಾಲೆಗಳಲ್ಲಿ ಮೂಲಸೌಕರ್ಯ ಹೇಗಿದೆ..!
ಶಾಲೆಗಳ್ನು ಆರಂಭಿಸುವುದಕ್ಕೂ ಮುನ್ನ ಶಾಲೆಯ ಶುಚಿತ್ವ ಹಾಗೂ ಕುಡಿಯುವ ನೀರು, ಶೌಚಾಲಯ ಕಡ್ಡಾಯವಾಗಿರಬೇಕು. ಈಗಾಗಲೇ ಬೇರೆ ರಾಜ್ಯಗಳಲ್ಲಿ ಶಾಲೆ ಶುರುವಾಗಿರುವ ವರದಿ ತರಿಸಿಕೊಂಡು, ಶಾಲೆಗಳು ಪ್ರಾರಂಭವಾದ ನಂತರ ಮಕ್ಕಳ ಆರೋಗ್ಯ ಹೇಗಿದೆ ಎನ್ನುವ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ರಾಜ್ಯದಲ್ಲಿ ಕೋವಿಡ್ ಯಾವ ಪ್ರಮಾಣದಲ್ಲಿ ಇದೆ ಎನ್ನುವ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಶಿಕ್ಷಣ ಸಚಿವರು ಚರ್ಚೆ ನಡೆಸಲಿದ್ದಾರೆ. ಜಿಲ್ಲಾವಾರು ಕೋವಿಡ್ ಪ್ರಕರಣಗಳ ಸಂಖ್ಯೆ ನೋಡಿಕೊಂಡು ಶಾಲೆ ಆರಂಭ ಮಾಡಲು ಚಿಂತಿಸಲಾಗುತ್ತಿದೆ ಎನ್ನಲಾಗಿದೆ. ಪ್ರತಿ ಶಾಲೆಯಲ್ಲೂ ಆರೋಗ್ಯ ಸಮಿತಿ ರಚನೆ ಮಾಡಬೇಕು. ಒಂದೊಂದು ತರಗತಿಗೆ ದಿನಬಿಟ್ಟು ದಿನ ತರಗತಿ ನಡೆಸಲು ಚಿಂತನೆ ನಡೆಸಲಾಗಿದೆ. ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬುಕುಮಾರ್, ಜಿಲ್ಲಾ ಉಪನಿರ್ದೇಶಕರು ಹಾಗೂ ಬಿಇಒಗಳು ಭಾಗವಹಿಸಲಿದ್ದಾರೆ.


ಇದೇ ತಿಂಗಳ 17ರಿಂದ ಪದವಿ, ಎಂಜಿನಿಯರಿಂಗ್, ಡಿಪ್ಲೋಮಾ ಕಾಲೇಜುಗಳ ಪ್ರಾರಂಭಕ್ಕೆ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಒಪ್ಪಿಗೆ ಸಿಕ್ಕ ಹಿನ್ನೆಲೆಯಲ್ಲಿ ಶಾಲೆಗಳನ್ನೂ ಪ್ರಾರಂಭಿಸಲು ಶಿಕ್ಷಣ ಇಲಾಖೆ ತಯಾರಿ ನಡೆಸುತ್ತಿದೆ. ಬೇರೆ ಆಯಾ ರಾಜ್ಯಗಳಲ್ಲಿನ ಶಿಕ್ಷಣ ಇಲಾಖೆ ಶಾಲೆ ತೆರೆಯಲು ಅನುಸರಿಸುವ ಮಾನದಂಡ ಏನು ಎಂಬುದರ ಕುರಿತು ಚರ್ಚೆ ಮಾಡಲಾಗುತ್ತದೆ.
ಶಾಲೆ ಪ್ರಾರಂಭಿಸಿದ್ರೆ ಒಂದು ತರಗತಿಯಲ್ಲಿ ಎಷ್ಟು ಮಕ್ಕಳಿರಬೇಕು, ಸಮ-ಬೆಸ ಸಂಖ್ಯೆ ಆಧಾರದಲ್ಲಿ ತಗತಿಗಳನ್ನು ನಡೆಸಬಹುದಾ ಎಂಬುದರ ಸಾಧಕ ಭಾದಕಗಳ ಚರ್ಚೆ ನಡೆಯಲಿದೆ. ಮೊದಲಿಗೆ 8,9,10 ಹಾಗೂ 11, 12 ನೇ ತರಗತಿಗಳ ತೆರೆದು, ಆನಂತರ ಪ್ರಾಥಮಿಕ ಶಾಲೆಗಳ ತೆರೆಯುವ ಕುರಿತು ಚರ್ಚೆ ಮಾಡಲಾಗುತ್ತಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bangaloredeaprtment of public instructionEDUCATION MINISTERexperts meetingschools opnesuresh kumar
ShareTweetSendShare
Join us on:

Related Posts

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

ಅಭಿಮಾನಿಗಳಿಂದ ರಕ್ತದಾನ.. RCB ಗೆಲುವಿಗೆ ಶುಭಹಾರೈಕೆ!

by Shwetha
March 29, 2026
0

2026ರ IPLನ ಮೊದಲ ಪಂದ್ಯವು ಬೆಂಗಳೂರಿನಲ್ಲಿ RCB & SRH ನಡುವೆ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಬೆಂಗಳೂರಿನ ಗಿರಿನಗರದ ರಾಷ್ಟೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು RCB...

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

ರಿಷಬ್ ಶೆಟ್ಟಿ ಅನ್‌ಫಾಲೋ: ಸ್ಯಾಂಡಲ್‌ವುಡ್‌ನಲ್ಲಿ ಚರ್ಚೆಗೆ ಕಾರಣ

by Shwetha
March 29, 2026
0

ನಟ ರಿಷಬ್ ಶೆಟ್ಟಿ ಅವರ ಇತ್ತೀಚಿನ ನಡೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ನಟ ರಾಜ್ ಬಿ ಶೆಟ್ಟಿ, ನಟಿ ರುಕ್ಕಿಣಿ...

ಇಸ್ರೇಲ್ ಮೇಲೆ ಯೆಮನ್ ಕ್ಷಿಪಣಿ ದಾಳಿ; ಮಧ್ಯಪ್ರಾಚ್ಯ ಸಂಘರ್ಷ ತೀವ್ರ

ಇಸ್ರೇಲ್ ಮೇಲೆ ಯೆಮನ್ ಕ್ಷಿಪಣಿ ದಾಳಿ; ಮಧ್ಯಪ್ರಾಚ್ಯ ಸಂಘರ್ಷ ತೀವ್ರ

by Shwetha
March 29, 2026
0

ಇಸ್ರೇಲ್-ಇರಾನ್ ನಡುವಿನ ಯುದ್ಧ ಆರಂಭವಾಗಿ ಒಂದು ತಿಂಗಳತ್ತ ಸಾಗುತ್ತಿರುವ ನಡುವೆಯೇ, ಈಗ ಯೆಮನ್ ಕೂಡ ಈ ಸಂಘರ್ಷಕ್ಕೆ ಪ್ರವೇಶಿಸಿದೆ. ಇದೇ ಮೊದಲ ಬಾರಿಗೆ ಯೆಮನ್‌ನಿಂದ ಇಸ್ರೇಲ್ ಮೇಲೆ...

ಉಪಚುನಾವಣೆ ಪ್ರಚಾರಕ್ಕೆ ಜಮೀರ್ ಆಹ್ವಾನ: ಏಕತೆ ಕಾಪಾಡಲು ಮಲ್ಲಿಕಾರ್ಜುನ ಕರೆ

ಉಪಚುನಾವಣೆ ಪ್ರಚಾರಕ್ಕೆ ಜಮೀರ್ ಆಹ್ವಾನ: ಏಕತೆ ಕಾಪಾಡಲು ಮಲ್ಲಿಕಾರ್ಜುನ ಕರೆ

by Shwetha
March 29, 2026
0

ಉಪಚುನಾವಣೆ ಪ್ರಚಾರದ ಹಿನ್ನಲೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಪ್ರಚಾರಕ್ಕೆ ಬರುವಂತೆ ಆಹ್ವಾನಿಸಿದ್ದೇನೆ ಎಂದು ಸಚಿವ S. S. ಮಲ್ಲಿಕಾರ್ಜುನ ತಿಳಿಸಿದ್ದಾರೆ. ಸದ್ಯ ಜಮೀರ್ ಅಹಮದ್...

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

RCB VS SRH : ಚಿನ್ನಸ್ವಾಮಿಯಲ್ಲಿ ಆರ್ ಸಿ ಬಿ ಅಬ್ಬರ ಕೊಹ್ಲಿ ಪಡಿಕ್ಕಲ್ ಜುಗಲ್ಬಂದಿಗೆ ಹೈದರಾಬಾದ್ ಧೂಳೀಪಟ

by Shwetha
March 29, 2026
0

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹನ್ನೊಂದು ತಿಂಗಳ ಬಳಿಕ ಮತ್ತೆ ಕ್ರಿಕೆಟ್ ಹಬ್ಬ ಕಳೆಗಟ್ಟಿದೆ. ಮೈದಾನದೆಲ್ಲೆಡೆ ಕೆಂಪು ಸಾಗರವೇ ಹರಿದುಬಂದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳು ತಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram