ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ ರ‍್ಯಾಂಡಮ್ ಟೆಸ್ಟ್ ನಡೆಸಲಾಗುತ್ತಿದೆ. ಉಳ್ಳಾಲ ವ್ಯಾಪ್ತಿಯಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವ ಕಾರಣ ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಅವರು ರ‍್ಯಾಂಡಮ್ ಟೆಸ್ಟ್ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಶಾಸಕರ ಸೂಚನೆ ಮೇರೆಗೆ ಉಳ್ಳಾಲ ನಗರಸಭೆಯ ಬಳಿಯ ಮಹಾತ್ಮಗಾಂಧಿ ರಂಗಮಂದಿರದಲ್ಲಿ ರಿಕ್ಷಾ ಚಾಲಕರು, ಬೀದಿ ಬದಿ ವ್ಯಾಪಾರಸ್ಥರು, ನಾಗರಿಕರಿಗೆ ಕೋವಿಡ್ ಟೆಸ್ಟ್ ನಡೆಸಲಾಗುತ್ತಿದೆ. ಪ್ರಾಥಮಿಕ ಆರೋಗ್ಯ ಕೇಂದ್ರ ಉಳ್ಳಾಲ ವತಿಯಿಂದ ಟೆಸ್ಟ್ ನಡೆಯುತ್ತಿದ್ದು, ಇಂದು ಸಂಜೆ 5 ಗಂಟೆಯವರೆಗೆ ಪರೀಕ್ಷೆ ಮಾಡಲಾಗುತ್ತದೆ.