BEL Probationary Engineer Recruitment 2025 : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಅಗತ್ಯವಿರುವ ಪ್ರೊಬೇಷನರಿ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ ಸಡಿಲಿಕೆ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.
ಹುದ್ದೆ : ಪ್ರೊಬೇಷನರಿ ಇಂಜಿನಿಯರ್
ಕರ್ತವ್ಯ ಸ್ಥಳ : ಭಾರತದೆಲ್ಲೆಡೆ
ಖಾಲಿಯಿರುವ ಹುದ್ದೆಗಳ ಸಂಖ್ಯೆ : 350
ಹುದ್ದೆಗಳ ವಿವರ:
ಪ್ರೊಬೇಷನರಿ ಇಂಜಿನಿಯರ್ (ಇಲೆಕ್ಟ್ರಾನಿಕ್ಸ್) 200
ಪ್ರೊಬೇಷನರಿ ಇಂಜಿನಿಯರ್ (ಮೆಕ್ಯಾನಿಕಲ್) 150
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಪ್ರೊಬೇಷನರಿ ಇಂಜಿನಿಯರ್ – ಬಿ.ಇ/ ಬಿ.ಟೆಕ್/ ಬಿ.ಎಸ್ಸಿ ಇಂಜಿನಿಯರಿಂಗ್ ಗ್ರಾಜ್ಯುಯೇಟ್ ಇನ್ ಇಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್.
• ಪ್ರೊಬೇಷನರಿ ಇಂಜಿನಿಯರ್ – ಬಿ.ಇ/ ಬಿ.ಟೆಕ್/ ಬಿ.ಎಸ್ಸಿ ಇಂಜಿನಿಯರಿಂಗ್ ಗ್ರಾಜ್ಯುಯೇಟ್ ಇನ್ ಮೆಕ್ಯಾನಿಕಲ್.
ವಯೋಮಿತಿ : ದಿನಾಂಕ 01/01/2025ಕ್ಕೆ ಅಭ್ಯರ್ಥಿಗಳು ಗರಿಷ್ಠ 25 ವರ್ಷ ವಯೋಮಾನ ಮೀರಿರಬಾರದು.
ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,000 ರಿಂದ ರೂ. 1,40,000 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು.
ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳಿಗೆ – ರೂ. 1180
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿ ಸಲ್ಲಿಸುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜನವರಿ 10, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 31, 2025
Website : https://test.cbexams.com/EDPSU/BEL/Apps/Registration/RegStep.aspx








