ಬೆಳಗಾವಿ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಡುರಸ್ತೆಯಲ್ಲಿಯೇ ಹೊತ್ತಿ ಉರಿದಿರುವ ಘಟನೆ ನಡೆದಿದೆ.
ಈ ಘಟನೆ ನಗರದ ಆರ್ ಪಿಡಿ ವೃತ್ತದ ಹತ್ತಿರ ರಾತ್ರಿ ನಡೆದಿದೆ. ತಾಲೂಕಿನ ಬಾಳೇಕುಂದ್ರಿ ಮೂಲದ ಕುಟುಂಬವು ಖಾನಾಪುರ ತಾಲೂಕಿನ ಅಸೋಗಾದಿಂದ ತಮ್ಮ ಗ್ರಾಮಕ್ಕೆ ಮರಳಿ ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಕಾರು ಆರ್ ಪಿಡಿ ವೃತ್ತದ ಬಳಿ ಆಗಮಿಸುತ್ತಿದ್ದಂತೆ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಚಾಲಕ ಕಾರು ನಿಲ್ಲಿಸಿ ಕೆಳಗೆ ಇಳಿದಿದ್ದಾನೆ. ಕಾರು ಹೊತ್ತಿ ಉರಿದಿದೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಚಾಲಕನ ಸಮಯಪ್ರಜ್ಞೆಯಿಂದ ಭಾರಿ ದುರಂತ ತಪ್ಪಿದ್ದು, ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.








