Belagavi : ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಬಸವೇಶ್ವರ ಪ್ರತಿಮೆ ಸ್ಥಾಪನೆ – ಸಿ ಎಂ ಘೋಷಣೆ…
ಬೆಳಗಾವಿ : ಘಟಪ್ರಭಾ ದಡದಲ್ಲಿ 108 ಅಡಿ ಎತ್ತರದ ಭವ್ಯವಾದ ಬಸವಣ್ಣನ ಪ್ರತಿಮೆಯನ್ನ ಸ್ಥಾಪಿಸಲಾಗುವುದು. ಈ ಪ್ರದೇಶವನ್ನು ವಿಶ್ವಮಟ್ಟದ ಪ್ರವಾಸಿ ತಾಣವಾಗಿಸುವ ಧ್ಯೇಯ ಸರಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬುಧವಾರ ನಗರದ ಬಸವೇಶ್ವರ ವೃತ್ತದ ಸಮೀಪದ ತಿನಿಸುಕಟ್ಟೆ ಬಳಿ ಶ್ರೀ ಬಸವೇಶ್ವರ ಪ್ರತಿಮೆ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜಾ ಕಾರ್ಯವನ್ನು ನೆರವೇರಿಸಿ ಅವರು ಮಾತನಾಡಿದರು.
ಬೆಳಗಾವಿಯಲ್ಲಿ ಬಸವೇಶ್ವರರ ಪ್ರತಿಮೆ ಪ್ರತಿಷ್ಠಾಪಿಸಿರುವುದು ಅತ್ಯಂತ ಸಂತೋಷದ ಸಂಗತಿ. ಬಸವಣ್ಣನವರ ವಿಚಾರಧಾರೆಗಳು ನಮ್ಮೆಲ್ಲರ ಬದುಕಿನಲ್ಲಿ ಹಾಸುಹೊಕ್ಕಾಗಿದೆ. 12ನೆ ಶತಮಾನದಲ್ಲಿ ಬಸವಣ್ಣನವರು ಸನ್ಮಾರ್ಗವನ್ನು ತೋರಿದ್ದಾರೆ. ವಿಶ್ವದ ಮೊದಲ ಸಂಸತ್ತು ಎಂದೆ ಕರೆಸಿಕೊಳ್ಳುವ ಅನುಭವ ಮಂಟಪ ಸ್ಥಾಪಿಸಿದರು ಎಂದು ಬೊಮ್ಮಾಯಿ ಹೇಳಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಗಢ ದಲ್ಲಿ ಶಿವಾಜಿ ಪ್ರತಿಮೆ ಸ್ಥಾಪನೆ ಬೆನ್ನಲ್ಲೇ ಒಲೈಕೆ ಆರೋಪ ಎದುರಾದ ಬೆನ್ನಲ್ಲೇ ಈ ಆರೋಪ ಸರಿಪಡಿಸಿಲು ಬಸವೇಶ್ವರರ ಪ್ರತಿಮೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಾರ್ಯಕ್ರಮದಲ್ಲಿ ಕೆ.ಎಲ್.ಇ ಸಂಸ್ಥೆಗಳ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಭಯ್ ಪಾಟೀಲ್ ಮೊದಲಾದವರು ಉಪಸ್ಥಿತರಿದ್ದರು.
Belagavi : Installation of 108 feet tall Basaveshwara statue on Ghataprabha bank – CM announcement…