Belagavi: ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡ ತಾಯಿ…
ಮಹಾರಾಷ್ಟ್ರ ಮೂಲದ ವ್ಯಕ್ತಿಯನ್ನ ಮದುವೆಯಾಗಿದ್ದ ಬೆಳಗಾವಿ ಮೂಲದ ಮಹಿಳೆ ತನ್ನ ಮೂವರು ಹೆಣ್ಣು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಬಿಳ್ಳೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನ ತಾಯಿ ಸುನೀತಾ ತುಕಾರಾಮ ಮಾಳಿ (27), ಮಕ್ಕಳಾದ ಅಮೃತಾ (13), ಅಂಕಿತ (10) ಮತ್ತು ಐಶ್ವರ್ಯ (7) ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ದಿನದ ಹಿಂದೆ ನಾಪತ್ತೆಯಾಗಿದ್ದಾರೆ ಎಂದು ಕುಟುಂಬಸ್ಥರು ಜತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು.
ಸೋಮವಾರ ದಂದು ಬಿಳ್ಳೂರ ಗ್ರಾಮದ ಹೊರವಲಯದ ಕೆರೆಯಲ್ಲಿ ನಾಲ್ಕು ಜನರ ಮೃತ ದೇಹಗಳು ತೇಲುತ್ತಿದ್ದುದನ್ನ ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಆತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿ ಸುನೀತಾ ತುಕಾರಾಮ ಮಾಳಿ (27) ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ನಿವಾಸಿ. ಕಳೆದ 14 ವರ್ಷದ ಹಿಂದೆ ಪಕ್ಕದ ಮಹಾರಾಷ್ಟ್ರ ರಾಜ್ಯದ ಬಿಳ್ಳೂರ ಗ್ರಾಮದ ತುಕಾರಾಮ ಮಾಳಿ ಎಂಬುವರ ಜೊತೆ ವಿವಾಹವಾಗಿದ್ದರು. ಆದರೆ ತುಕಾರಾಮ ನಿತ್ಯ ಮದ್ಯ ಸೇವಿಸಿ ಮನೆಯಲ್ಲಿ ಕಿರುಕುಳ ಕೊಡುತ್ತಿದ್ದ ಎಂದು ತಿಳಿದು ಬಂದಿದೆ. ಕೌಟುಂಬಿಕ ಕಲಹದಿಂದ ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
Belagavi: Mother commits suicide with three children
ಇದನ್ನೂ ಓದಿ:https://saakshatv.com/jharkhand-gangra…ogarh-2-arrested/