ಕಲುಷಿತ ನೀರು ಸೇವನೆ ಅನಾಹುತ
50 ಕ್ಕೂ ಹೆಚ್ಚು ಜನ ಅಸ್ವಸ್ಥ
ಬೆಳಗಾವಿಯ ಮುದೇನೂರು ಗ್ರಾಮದಲ್ಲಿ ಘಟನೆ
ಆಸ್ಪತ್ರೆಯಲ್ಲಿ ಅಸ್ವಸ್ಥರಿಗೆ ಮುಂದುವರೆದ ಚಿಕಿತ್ಸೆ
ಅಸ್ವಸ್ಥರ ರೋಗ್ಯ ವಿಚಾರಸಿದ ಶಾಸಕ ಮಹಾದೇವಪ್ಪ
Belagavi : ಕಲುಷಿತ ನೀರು ಸೇವನೆ – 50 ಕ್ಕೂ ಅಧಿಕ ಮಂದಿ ಅಸ್ವಸ್ಥ ನಲ್ಲಿಗಳಿಗೆ ನೀರು ಪೂರೈಸುವ ಪೈಪ್‌ಲೈನ್ ಒಡೆದು ಚರಂಡಿ ನೀರು ಕುಡಿಯುವ ನೀರಿಗೆ ಸೇರ್ಪಡೆಯಾಗುತ್ತಿದ್ದು , ಇಂತಹ ಕಲುಷಿತ ನೀರು ಸೇವಿಸಿದ ಪರಿಣಾಮ ಗ್ರಾಮಸ್ಥರು ಅಸ್ವಸ್ಥಗೊಂಡಿದ್ದಾರೆ..
3 ದಿನಗಳ ಅಂತರದಲ್ಲಿ ಸುಮಾರು 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಸದ್ಯ ಅಸ್ವಸ್ಥಗೊಂಡಿರುವ ಗ್ರಾಮಸ್ಥರನ್ನು ರಾಮದುರ್ಗದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಸ್ವಸ್ಥಗೊಂಡಿರುವವವರ ಆರೋಗ್ಯ ವಿಚಾರಿಸಿದ್ದಾರೆ.. ಈ ಘಟನೆಗೆ ಗ್ರಾಮ ಪಂಚಾಯಿತಿ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದ್ದು, ಅಸ್ವಸ್ಥರ ಕುಟುಂಬಸ್ಥರು ಗ್ರಾಮ ಪಂಚಾಯತಿ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.







