ರೈಲಿಗೆ ತಲೆಕೊಟ್ಟು ಶಿಕ್ಷಕಿ ಆತ್ಮಹತ್ಯೆ – ಹೆಡ್ ಮಾಸ್ಟರ್ ವಿರುದ್ಧ ಡೆತ್ ನೋಟ್…
ಶಿಕ್ಷಕಿಯೋರ್ವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ರೈಲ್ವೆ ಸ್ಟೇಷನ್ ಸಮೀಪ ನಡೆದಿದೆ.
ಕುಡಚಿ ನಿವಾಸಿಯಾಗಿರುವ ಶಿಕ್ಷಕಿ ಅನ್ನಪೂರ್ಣ ಬಸಾಪೂರೆ (55) ಆತ್ಮಹತ್ಯೆಗೆ ಶರಣಾಗಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಇವರು ಹೆಡ್ ಮಾಸ್ಟರ್ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಡೆತ್ ನೋಟ್ ಬರೆದಿಟ್ಟಿರುವ ಶಿಕ್ಷಕಿ “ನನ್ನ ಸಾವಿಗೆ ಶಾಲೆಯ ಮುಖ್ಯ ಶಿಕ್ಷಕ ಮತ್ತು ಸಹ ಶಿಕ್ಷಕಿಯೇ ಕಾರಣ, ಅವರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮಸ್ಥರು ಮತ್ತು ಕಟುಂಬಸ್ಥರು ಶಾಲೆಯ ಎದುರು ಶಿಕ್ಷಕಿಯ ಮೃತದೇಹ ತಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ.
ರಾಯಭಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Belagavi: Teacher commits suicide by head on train – Death note against head master…