ಬೆಳಗಾವಿ : ಬೆಳಗಾವಿಯಲ್ಲಿ ಕೋರೊನಾ ಶಂಕಿತ 70 ವರ್ಷದ ವೃದ್ಧ ಸಾವು ಹಿನ್ನಲೆ, ಸೈಕಲ್ ಮೇಲೆ ಸಾಗಿಸಿ ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಈ ವಿಚಾರವಾಗಿ ಬೇಸರವ್ಯಕ್ತಪಡಿಸಿ ಜಿಲ್ಲಾಡಳಿತಕ್ಕೆ ಎಚ್ಚರಿಕೆ ಕೊಟ್ಟ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ನಾಗರಿಕ ಸಮಾಜದಲ್ಲಿರುವ ನಾವು ಸದಾ ಹೃದಯವಂತಿಕೆಯಿಂದ ಜೀವಿಸಬೇಕಿದೆ. ಮೃತರ ಸಂಸ್ಕಾರವನ್ನೂ ಗೌರವಯುತವಾಗಿ ಮಾಡಬೇಕು. ಮಹಾಮಾರಿ ಕೊರೋನಾ ಸೋಂಕಿನಿಂದಾಗಲೀ, ಬೇರೆ ಯಾವುದೇ ರೀತಿಯ ಅನಾರೋಗ್ಯದಿಂದ ಮೃತರಾದ ವ್ಯಕ್ತಿಗಳ ಅಂತ್ಯಕ್ರಿಯೆಗೆ ಅಧಿಕಾರಿಗಳು ಸೂಕ್ತ ಸಹಕಾರ ನೀಡಬೇಕು ಎಂದಿದ್ದಾರೆ.
ಇನ್ನೂ ಜಿಲ್ಲೆಯಲ್ಲಿ ಪದೇ ಪದೇ ಇಂತಹ ಅಮಾನವೀಯ ಘಟನೆಗಳು ನಡೆಯುತ್ತಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ರಮೇಶ್ ಜಾರಕಿಹೊಳಿ ಅವರು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.







