ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ್ದ ತೀರ್ಪನ್ನು ಹೈಕೋರ್ಟ್ ಅಮಾನತ್ತಿನಲ್ಲಿಟ್ಟು ಆದೇಶ ಹೊರಡಿಸಿದೆ.
ಹೀಗಾಗಿ ಶಾಸಕ ಸತೀಶ್ ಸೈಲ್ ಸೇರಿದಂತೆ ಆರೋಪಿಗಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಧಿಸಿದ್ದ ಶಿಕ್ಷೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇನ್ನಿತರ ಆರೋಪಿಗಳು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಶಿಕ್ಷೆಯನ್ನು ಅಮಾನತ್ತಿನಲ್ಲಿಡುವಂತೆ ಸೂಚಿಸಿದೆ.
ಅಲ್ಲದೇ, ಆರೋಪಿಗಳಿಗೆ 6 ವಾರಗಳಲ್ಲಿ ದಂಡದ ಮೊತ್ತ ಶೇ. 25ರಷ್ಟು ಹಣವನ್ನು ಠೇವಣಿಯಾಗಿ ಕೋರ್ಟ್ ನಲ್ಲಿ ಇಡುವಂತೆ ಸೂಚಿಸಲಾಗಿದೆ. ಹೀಗಾಗಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ ಪ್ರಕರಣದ ಇತರೆ ಆರೋಪಿಗಳು ಶೀಘ್ರವೇ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.