ನಾಗಾಲ್ಯಾಂಡ್ ನಲ್ಲಿ ಭೀಕರ ಅಪಘಾತ : belgaum ಬೆಳಗಾವಿಯ ಯೋಧ ವಿಧಿವಶ
ಬೆಳಗಾವಿ : ನಾಗಾಲ್ಯಾಂಡ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕಾರು ಅಪಘಾತ ಸಂಭವಿಸಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಬೆಳಗಾವಿ ಮೂಲದ ಯೋಧರೊಬ್ಬರು ಸಾವನ್ನಪ್ಪಿದ್ದಾರೆ.
ಗೋಕಾಕ್ ತಾಲೂಕು ಕೊಣ್ಣೂರ ಗ್ರಾಮದ ಮಂಜುನಾಥ ಅಪ್ಪಣ್ಣ ಗೌಡಣ್ಣವರ ಎಂಬುವವರು ನಾಗಾಲ್ಯಾಂಡ್ ಗಡಿಯಲ್ಲಿ ಗಸ್ತು ತಿರುಗುವ ವೇಳೆ ಅವರ ವಾಹನ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.
ಮಂಜುನಾಥ ಅಪ್ಪಣ್ಣ ಗೌಡಣ್ಣವರ ಅವರು ಕಳೆದ 18 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಸದ್ಯ ನಾಗಾಲ್ಯಾಂಡ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಭಾರತೀಯ ಸೇನೆಯಲ್ಲಿ ಚಾಲಕನಾಗಿದ್ದು, ತಮ್ಮ ಕರ್ತವ್ಯಕ್ಕೆ ತೆರಳುವಾಗ ಅರಣ್ಯದಲ್ಲಿ ವಾಹನ ಅಪಘಾತಕ್ಕೊಳಗಾಗಿ ಕೊನೆಯುಸಿರೆಳೆದಿದ್ದಾರೆ.
ಯೋಧನ ಪಾರ್ಥಿವ ಶರೀರ ನಾಳೆ ಸಂಜೆ 6 ಗಂಟೆಯ ಸುಮಾರಿಗೆ ಗೋವಾ ಮಾರ್ಗವಾಗಿ ಸ್ವಗ್ರಾಮಕ್ಕೆ ಬರಲಿದೆ.