ಬೆಳಗಾವಿ ಬೈ ಎಲೆಕ್ಷನ್ : ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ
ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಸರಳವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಸತೀಶ್ ಜಾರಕಿಹೊಳಿ ಅವರು ಚುನಾವಣಾ ಅಧಿಕಾರಿ ಡಾ. ಹರೀಶ್ ಕುಮಾರ್ ಅವರಿಗೆ ನಾಲ್ಕು ಸೆಟ್ ನಾಮಪತ್ರ ಸಲ್ಲಿಸಿದರು.
ಮೊದಲ ಸೆಟ್ ನಾಮಪತ್ರ ಸಲ್ಲಿಕೆ ವೇಳೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸತೀಶ್ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ್ರು.
ಎರಡನೇ ನಾಮಪತ್ರ ಸಲ್ಲಿಕೆ ವೇಳೆ ಆರ್.ವಿ. ದೇಶಪಾಂಡೆ, ಎಂಬಿ ಪಾಟೀಲ, ಮೂರನೇ ಸೆಟ್ ಸಲ್ಲಿಸುವಾಗ ಸತೀಶ್ ಗೆ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಶಾಸಕ ಫೀರೋಜ್ ಶೇಠ್.
ನಾಲ್ಕನೇ ನಾಮಪತ್ರ ಸಲ್ಲಿಸುವಾಗ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಅಂಜಲಿ ನಿಂಬಾಳ್ಕರ್ ಭಾಗಿಯಾಗಿದ್ದರು.
