ಬೆಳಗಾವಿ ಜಿಲ್ಲೆಗೆ ಹೆಚ್ಚು ಸಚಿವಸ್ಥಾನ ನೀಡ್ಬೇಕಿತ್ತು : ಸತೀಶ್ ಜಾರಕಿಹೊಳಿ

1 min read
Satish jarakiholi

ಬೆಳಗಾವಿ ಜಿಲ್ಲೆಗೆ ಹೆಚ್ಚು ಸಚಿವಸ್ಥಾನ ನೀಡ್ಬೇಕಿತ್ತು : ಸತೀಶ್ ಜಾರಕಿಹೊಳಿ

ಬೆಳಗಾವಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾತಿ ನೇತೃತ್ವದ ಸರ್ಕಾರದ ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದ್ದು, ಈ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಗೆ ಇನ್ನೂ ಹೆಚ್ಚು ಸಚಿವ ಸ್ಥಾನಗಳನ್ನು ನೀಡಬೇಕಾಗಿತ್ತು.

ಜಿಲ್ಲೆಗೆ ಎಷ್ಟು ಸಚಿವ ಸ್ಥಾನ ಕೊಡಬೇಕು, ಆ ಜಿಲ್ಲೆಯಲ್ಲಿ ಎಷ್ಟು ಶಾಸಕರಿದ್ದಾರೆ ಎಂಬುದನ್ನು ಸರ್ಕಾರ ನಡೆಸುವವರು ವಿಚಾರಮಾಡಿ ನಿರ್ಧಾರ ತೆಗೆದುಕೊಳ್ಳಬೇಕು.

Satish Zarakiholi saaksha tv

ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಜಿಲ್ಲೆಯ ಇನ್ನೂ ಕೆಲವರಿಗೆ ಸಚಿವ ಸ್ಥಾನ ನೀಡಿದರೇ ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ನಾವು ಕೂಡ ಆಗ್ರಹ ಮಾಡುತ್ತೇವೆ ಎಂದರು.

ಸರ್ಕಾರದ ಆಡಳಿತಾವಧಿ ಮುಂದಿನ ಕೆಲವೇ ತಿಂಗಳಾಗಿರುವುದರಿಂದ ಮತ್ತೆ ಜಿಲ್ಲೆಗೆ ಸಚಿವ ಸ್ಥಾನ ನೀಡುತ್ತಾರೋ ಇಲ್ಲವೋ ಗೊತ್ತಿಲ್ಲ. ಸರ್ಕಾರ ಹಾಗೂ ಮುಖ್ಯಮಂತ್ರಿಗಳೇ ಈ ಬಗ್ಗೆ ಉತ್ತರ ಕೊಡಬೇಕು ಎಂದು ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd