Belgaum : ವಿದ್ಯುತ್ ತಂತಿ ತುಳಿದು ಬಾಲಕಿ ಸಾವು
ಬೆಳಗಾವಿ : ಪಕ್ಕದ ಮನೆಗೆ ಓದಲು ಹೋಗಿದ್ದ ಎಂಟು ವರ್ಷದ ಬಾಲಕಿ ವಿದ್ಯುತ್ ತಂತಿ ತುಳಿದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗೋಕಾಕ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.
8 ವರ್ಷದ ಹುಲಿಕಟ್ಟಿ ಗ್ರಾಮದ ಚೂನವ್ವ ಸರ್ವಿ ಮೃತ ಬಾಲಕಿ.
ಕಬ್ಬಿನ ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಲಕಿ ಕೊನೆಯುಸಿರೆಳೆದಿದ್ದಾಳೆ.
ಓದಿಕೊಂಡು ವಾಪಸ್ ಮನೆಗೆ ಬರುವಾಗ ದುರ್ಘಟನೆ ಸಂಭವಿಸಿದೆ.

ಬಾಲಕಿ ಸಾವಿಗೆ ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಹೀಗಾಗಿ ಹೆಸ್ಕಾಂ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಗ್ರಾಮಸ್ಥರು, ಕುಟುಂಬಸ್ಥರ ಒತ್ತಾಯ ಮಾಡುತ್ತಿದ್ದಾರೆ.
ಸ್ಥಳಕ್ಕೆ ಗೋಕಾಕ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಗೋಕಾಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








