Belgaum | 31ನೇ ದಿನಕ್ಕೆ ಕಾಲಿಟ್ಟ ಆಪರೇಷನ್ ಚಿರತೆ ಕಾರ್ಯಾಚರಣೆ
ಬೆಳಗಾವಿ : ಬೆಳಗಾವಿ ಗಾಲ್ಫ್ ಮೈದಾನದಲ್ಲಿ ಆಪರೇಷನ್ ಚಿರತೆ ಕಾರ್ಯಾಚರಣೆ ಮುಂದುವರೆದಿದೆ.
ಆಪರೇಷನ್ ಚಿರತೆ ಕಾರ್ಯಾಚರಣೆ 31ನೇ ದಿನಕ್ಕೆ ಕಾಲಿಟ್ಟಿದೆ.
ಕಳೆದ ಒಂದು ವಾರದಿಂದ ಆನೆಗಳಿಂದ ಅರವಳಿಕೆ ಶಾರ್ಪ್ ಶೂಟರ್ ಕಾರ್ಯಾಚರಣೆ ನಡೆಯುತ್ತಿದೆ.

ಇಂದೂ ಕೂಡ ಗಾಲ್ಫ್ ಮೈದಾನದಲ್ಲಿ ಬೃಹತ್ ಕೋಂಬಿಂಗ್ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿಗಳಿಂದ ಜಂಟಿ ಕಾರ್ಯಾಚರಣೆ ಮುಂದುವರೆದಿದೆ.
ಕೋಂಬಿಂಗ್ ಕಾರ್ಯಾಚರಣೆಯಲ್ಲಿ ಎರಡು ಆನೆ ಗಳು, 7 ಅರವಳಿಕೆ ಶಾರ್ಪ್ ಶೂಟರ್ ಗಳು ಭಾಗಿಯಾಗಿದ್ದಾರೆ.
ಕಳೆದ ಒಂದು ವಾರದದಿಂದ ಚಿರತೆ ಟ್ರ್ಯಾಪ್ ಕ್ಯಾಮೆರಾದಲ್ಲಿ ಕಾಣದ ಹಿನ್ನಲೆ ಕೊನೆಯ ಹಂತದ ಕೊಂಬಿಂಗ್ ಕಾರ್ಯಾಚರಣೆ ನಡೆಯುತ್ತಿದೆ.