Belgaum | ಸತೀಶ್ ಜಾರಕಿಹೊಳಿ ಅವರನ್ನ ಕಟ್ಟಿಹಾಕಲು ಬಿಜೆಪಿ ರಣತಂತ್ರ
ಬೆಳಗಾವಿ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ತಮ್ಮ ಸ್ವಕ್ಷೇತ್ರದಲ್ಲಿಯೇ ಸೋಲಿಸಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ.
ಯಮಕನಮರಡಿಯಲ್ಲಿ ಇಂದು ಸಂಜೆ ಬಿಜೆಪಿ ಮಹತ್ವದ ಸಭೆ ನಡೆಯಲಿದೆ.
ಮಾರುತಿ ಅಷ್ಟಗಿ ಅಭಿನಂದನಾ ಸಮಾರಂಭ ಹೆಸರಿನಲ್ಲಿ ಜಿಲ್ಲೆಯ ಬಿಜೆಪಿ ನಾಯಕರಿಗೆ ಆಹ್ವಾನ ನೀಡಲಾಗಿದೆ.
ಕಳೆದ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಸೋಲುಂಡಿದ್ದ ಬಿಜೆಪಿಯ ಮಾರುತಿ ಅಷ್ಟಗಿ ಅವರು ಇತ್ತೀಚೆಗೆ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಮಾರುತಿ ಅಷ್ಟಗಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕೆ ಸಚಿವರಾದ ಉಮೇಶ್ ಕತ್ತಿ, ಶಶಿಕಲಾ ಜೊಲ್ಲೆ, ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ಲಕ್ಷ್ಮಣ್ ಸವದಿ, ಅಭಯ್ ಪಾಟೀಲ್ ಆದಿಯಾಗಿ ಜಿಲ್ಲಾ ನಾಯಕರಿಗೆ ಆಹ್ವಾನ ನೀಡಲಾಗಿದೆ.
ಆದ್ರೆ ಸಮಾರಂಭದ ವೇದಿಕೆ ಬ್ಯಾನರ್ ನಲ್ಲಿ ಜಾರಕಿಹೊಳಿ ಬ್ರದರ್ಸ್ ಭಾವಚಿತ್ರ ಮಿಸ್ ಆಗಿದೆ.
ರಮೇಶ್ ಜಾರಕಿಹೊಳಿ,ಬಾಲಚಂದ್ರ ಜಾರಕಿಹೊಳಿ ಪೋಟೋ ಗೆ ಕೊಕ್ ನೀಡಲಾಗಿದೆ. ಇದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.








