Belgaum | ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವು
ಬೆಳಗಾವಿ : ಹೈವೋಲ್ಟೆಜ್ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ನಡೆದಿದೆ.
ವಿನಾಯಕ್ ಕಲ್ಕಾಂಬಕರ್ (24), ಗೋಪಾಲ್ ಅಗಸಗೇಕರ್ (52) ಮೃತರಾಗಿದ್ದಾರೆ.

ಮನೆಯ ಮೇಲೆ ಸ್ಟಿಲ್ ಶೀಟ್ ಅಳವಡಿಕೆ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಕೊನೆಯುಸಿರೆಳೆದಿದ್ದಾರೆ.
ಅವಘಡದಲ್ಲಿ ಇನ್ನೊಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.