Belgavi | ಡಿಸಿ ಕಚೇರಿ ಮುಂದೆ ಶವವಿಟ್ಟು ಪ್ರತಿಭಟನೆ
ಬೆಳಗಾವಿ : ಸ್ಮಶಾನಕ್ಕೆ ತೆರಳಲು ದಾರಿ ಇಲ್ಲದಿದ್ದಕ್ಕೆ ಬೆಳಗಾವಿ ಡಿಸಿ ಕಚೇರಿ ಆವರಣದಲ್ಲಿ ಮೃತದೇಹ ಇಟ್ಟು ಏಣಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಏಣಗಿ ಗ್ರಾಮದ ಅಬ್ದುಲ್ ಖಾದರ್ ಮಿಶ್ರಿಕೋಟಿ(65) ಮೃತಪಟ್ಟಿದ್ದು, ಮೃತರ ಸಂಬಂಧಿ ಇಬ್ರಾಹಿಂ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟಿಸಿದ್ದಾರೆ.
ಸ್ಮಶಾನಕ್ಕೆ ಹಾದಿ ಕೊಡದ ಸರ್ಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಹಿಂದೂ, ಮುಸ್ಲಿಂ ಎರಡೂ ಸಮುದಾಯದ ಸ್ಮಶಾನಗಳಿಗೆ ತೆರಳಲು ಹಾದಿ ಇಲ್ಲ.
ಹಲವು ಬಾರಿ ಮನವಿ ಮಾಡಿದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ.
ಹೀಗಾಗಿ ಬೆಳಗಾವಿ ಡಿಸಿ ಕಚೇರಿಗೆ ಮೃತದೇಹ ತಂದು ಪ್ರತಿಭಟನೆ ಮಾಡ್ತಿದ್ದೇವೆ.
ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಇಲ್ಲೇ ಸಮಾಧಿ ಮಾಡ್ತೀವಿ ಎಂದು ಸಂಬಂಧಿಕರು, ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಇನ್ನು ಪ್ರತಿಭಟನೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಡಿಸಿ ನಿತೇಶ ಪಾಟೀಲ ಅವರು, ಶೀಘ್ರವೇ ಸ್ಮಶಾನ ಭೂಮಿ ಕೊಡುವ ಭರವಸೆ ನೀಡಿದ್ದಾರೆ.