ಕಾಡಮಲ್ಲಿಗೆ ಖ್ಯಾತಿಯ ಬೆಳ್ಳಾರೆ ವಿಶ್ವನಾಥ ರೈ ವಿಧಿವಶರಾಗಿದ್ದಾರೆ.. ಕೆಲ ದಿನಗಳಿಂದ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದ ಇವರು ಕಳೆದ ರಾತ್ರಿ ಬೆಳ್ಳಾರೆಯ ಸ್ವಗ್ರಹದಲ್ಲಿ ಕೊನೆಯುಸಿರೆಳೆದಿದ್ದಾರೆ..
ಇವರು ಅಚ್ಚುತ ಮಣಿಯಾಣಿ ಯವರಿಂದ ಯಕ್ಷ ನಾಟ್ಯಾಭ್ಯಾಸ ಮಾಡಿ ತನ್ನ 9ನೇ ವರ್ಷ ಪ್ರಾಯದಲ್ಲಿ ರಂಗಪ್ರವೇಶ ಮಾಡಿದರು… ರಾಜನ್ ಅಯ್ಯರ್ ಮತ್ತು ಕೇಶವ ಮಾಸ್ತರ್ ಅವರಿಂದ ಭರತನಾಟ್ಯವನ್ನೂ ಅಭ್ಯಾಸ ಮಾಡಿದರು. ಬಾಲಕನಿದ್ದಾಗಲೇ ತನ್ನ ಅಭಿನಯಕ್ಕೆ ಮಾಸ್ಟರ್ ಹಿರಣ್ಣಯ್ಯರಿಂದ ಚಿನ್ನದ ಉಂಗುರದ ಸನ್ಮಾನ ಸ್ವೀಕರಿಸಿದ್ದಾರೆ.
ಕರ್ನಾಟಕ ಮೇಳ ಒಂದರಲ್ಲೇ 35 ವರ್ಷಗಳ ತಿರುಗಾಟ ಮಾಡಿದ್ದಾರೆ.