ಹೋಂ ಕ್ವಾರಂಟೈನ್ ನಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ
ಬಳ್ಳಾರಿ : ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟ ಹಿನ್ನೆಲೆ ಬಳ್ಳಾರಿ ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ಅವರು ಹೋಂ ಕ್ವಾರಂಟೈನ್ ಆಗಿದ್ದಾರೆ.ಜಿಲ್ಲಾಧಿಕಾರಿಗಳ ನಿವಾಸದ ಎದುರು ಅಧಿಕಾರಿಗಳು ಹೋಂ ಕ್ವಾರಂಟೈನ್ ಬೋರ್ಡ್ ಹಾಕಿದ್ದಾರೆ.
ಇಂದಿನಿಂದ ಶನಿವಾರದವರೆಗೆ ಹೋಂ ಕ್ವಾರಂಟೈನ್ ನಲ್ಲಿ ಇರಲಿದ್ದು, ಮನೆಯಿಂದಲೇ ಕೆಲಸ ಮಾಡೋದಾಗಿ ಡಿಸಿ ನಕುಲ್ ಅವರು ಮಾಹಿತಿ ನೀಡಿದ್ದಾರೆ. ಜೊತೆಗೆ ಯಾರು ಗೊಂದಲಗಳಿಗೆ ಒಳಗಾಗಬೇಡಿ ಮನೆಯಲ್ಲಿ ಎಲ್ಲರೂ ಆರಾಮಾಗಿ ಇದ್ದಾರೆ ಎಂದು ತಿಳಿಸಿದ್ದಾರೆ.








