Wed. Oct 28th, 2020

ಗಣಿನಾಡಿನಲ್ಲಿ ಕೊಚ್ಚಿ ಹೋದ ತಾತ್ಕಾಲಿಕ ಸೇತುವೆ : ಜನರ ಪರದಾಟ : ಯುವಕರ ಸಹಾಯಾಸ್ತ

1 min read

ಬಳ್ಳಾರಿ : ಬಳ್ಳಾರಿಯ ಸಿರುಗುಪ್ಪ ತಾಲೂಕಿನ ನೆರೆ ರಾಜ್ಯಕ್ಕೆ ಸಂಪರ್ಕಿಸುವ ಹೆದ್ದಾರಿ ರಸ್ತೆಯಲ್ಲಿ ಸೇತುವೆ ಕಾಮಗಾರಿ ನಡೆದಿದ್ದು, ಗುತ್ತಿಗೆದಾರನ ನಿರ್ಲಕ್ಷ್ಯಕ್ಕೆ ಪಕ್ಕದ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದೆ..

ಸೇತುವೆ ಕೊಚ್ಚಿ ಹೋಗಿ ತಿಂಗಳು ಕಳೆದಿದ್ದು, ಇದರಿಂದಾಗಿ ಸಾರ್ವಜನಿಕರು ಪಾಡು ಬೀಳುವಂತಾಗಿದೆ.

ಆದರೆ ಸಂಬಂಧ ಪಟ್ಟ ಅಧಿಕಾರಿಗಳು ಮಾತ್ರ ಈ ಬಗ್ಗೆ ಕೆಡಿಸಿಕೊಳ್ಳದೇ, ದುರಸ್ಥಿ ಕಾರ್ಯಕ್ಕೂ ಕೈಹಾಕದೇ ಮೀನಾಮೇಷ ಎಣಿಸುತ್ತಿರೋದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಇನ್ನೂ ಗ್ರಾಮದ ಕೆಲವು ಯುವಕರು ಸ್ವಯಂ ಪ್ರೇರಿತರಾಗಿ ರಭಸವಾಗಿ ಹರಿಯುತ್ತಿರುವ ಹಳ್ಳ ದಾಟಲು ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದು ಸಾರ್ವಜನಿಕರ ಪ್ರಶಂಶೆಗೆ ಪಾತ್ರರಾಗಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV