ADVERTISEMENT
Wednesday, October 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಒಂದು ಕೋಟಿ ದಾಟಿದ ಆಯುಷ್ಮಾನ್ ಭಾರತ್ ಯೋಜನೆಯ ಫಲಾನುಭವಿಗಳು…

admin by admin
May 20, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಹೊಸದಿಲ್ಲಿ, ಮೇ 20 : ಕೇಂದ್ರದ ಆಯುಷ್ಮಾನ್ ಭಾರತ್ ಯೋಜನೆಯಡಿ ಲಾಭ ಪಡೆದವರ ಸಂಖ್ಯೆ ಒಂದು ಕೋಟಿ ದಾಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. “ಆಯುಷ್ಮಾನ್ ಭಾರತ್ ಫಲಾನುಭವಿಗಳ ಸಂಖ್ಯೆ 1 ಕೋಟಿಯನ್ನು ದಾಟಿದೆ ಎನ್ನುವುದು ಪ್ರತಿಯೊಬ್ಬ ಭಾರತೀಯರಿಗೂ ಹೆಮ್ಮೆ ತರುವ ವಿಷಯ‌” ಎಂದು ಅವರು ಟ್ವೀಟ್ ಮಾಡಿದ್ದು, ಈ ಯೋಜನೆಯು ಅನೇಕರ ಜೀವನದ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ ಎಂದು ಬರೆದಿದ್ದಾರೆ.

ಸರಣಿ ಟ್ವೀಟ್‌ ಗಳನ್ನು ಮಾಡಿರುವ ಪ್ರಧಾನಿ ಮೋದಿ 1 ಕೋಟಿ ಫಲಾನುಭವಿಗಳಲ್ಲಿ ಒಬ್ಬರಾದ ಮೇಘಾಲಯದ ಸೇನಾ ಸಿಬ್ಬಂದಿಯ ಪತ್ನಿಯಾಗಿರುವ ಪೂಜಾ ಥಾಪಾ ಅವರೊಂದಿಗೆ ನಾನು ದೂರವಾಣಿ ಸಂಭಾಷಣೆ ನಡೆಸಿರುವುದಾಗಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನಗಳ ಬಗ್ಗೆ ಮಾತನಾಡಿದ್ದು, ಯೋಜನೆಯ ಪ್ರಯೋಜನಗಳ ಬಗ್ಗೆ ತಿಳಿಸಿದ್ದಾರೆ ಮತ್ತು ಆಯುಷ್ಮಾನ್ ಭಾರತ್ ಜೊತೆ ಕೆಲಸ ಮಾಡುತ್ತಿರುವ ವೈದ್ಯರು, ದಾದಿಯರು, ಆರೋಗ್ಯ ಸೇವೆ ಕಾರ್ಯಕರ್ತರನ್ನು ಕಾರ್ಯಕರ್ತರನ್ನು ಶ್ಲಾಘಿಸಿದ್ದಾರೆ. ಆಯುಷ್ಮಾನ್ ಯೋಜನೆಯ ಫಲಾನುಭವಿಗಳಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.ಅವರ ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ಮೋದಿ ಅವರು ಟ್ವಿಟರ್ ನಲ್ಲಿ ಬರೆದಿದ್ದಾರೆ.

Related posts

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

October 7, 2026
SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

October 7, 2026

ಈ ಯೋಜನೆಯ ಅತಿದೊಡ್ಡ ಪ್ರಯೋಜನವೆಂದರೆ “ಪೋರ್ಟಬಿಲಿಟಿ”, ಏಕೆಂದರೆ ಫಲಾನುಭವಿಗಳು ನೋಂದಾಯಿತ ಸ್ಥಳಗಳಲ್ಲಿ ಮಾತ್ರವಲ್ಲದೆ ಭಾರತದ ಇತರ ಭಾಗಗಳಲ್ಲಿಯೂ ಉತ್ತಮ ಗುಣಮಟ್ಟದ ಮತ್ತು ಒಳ್ಳೆ ವೈದ್ಯಕೀಯ ಆರೈಕೆಯನ್ನು ಪಡೆಯಬಹುದು. ಮನೆಯಿಂದ ದೂರವಿದ್ದು ಕೆಲಸ ಮಾಡುವವರಿಗೆ ಅಥವಾ ನಾವು ನೆಲೆಸದಿರುವ ಜಾಗದಲ್ಲಿ ದಾಖಲಾತಿ ಮಾಡಿಕೊಂಡವರಿಗೆ ಇದು ಸಹಕಾರಿಯಾಗಿದೆ ಎಂದು ‌ಹೇಳಿದ್ದಾರೆ. ಪ್ರಧಾನಿ ಮಂತ್ರಿ ಜನ ಆರೋಗ್ಯ ಯೋಜನೆ-ಆಯುಷ್ಮಾನ್ ಭಾರತ್ ಯೋಜನೆಯನ್ನು 2018ರ ಸೆಪ್ಟೆಂಬರ್ ತಿಂಗಳಲ್ಲಿ ಆರಂಭಿಸಲಾಗಿದ್ದು, ಜಗತ್ತಿನಲ್ಲಿಯೇ ಸರ್ಕಾರದ ಅತಿದೊಡ್ಡ ಆರೋಗ್ಯ ಸೇವೆ ಯೋಜನೆ ಎಂದು ಪರಿಗಣಿಸಲಾಗಿದೆ.

ಸಾಮಾನ್ಯವಾಗಿ ತಮ್ಮ ಅಧಿಕೃತ ಪ್ರವಾಸದ ವೇಳೆ ಆಯುಷ್ಮಾನ್ ಭಾರತ್ ಯೋಜನೆಯ ಲಾಭ ಪಡೆಯುವ ಫಲಾನುಭವಿಗಳ ಜೊತೆ ಸಂವಹನ ನಡೆಸುತ್ತೇನೆ ಎಂದು ತಿಳಿಸಿದ ಪ್ರಧಾನಿ ಮೋದಿ, ದುಃಖಕರವೆಂದರೆ ಈ ಬಾರಿ ಕೊರೋನಾ ವೈರಸ್ ನಿಂದಾಗಿ ಪ್ರವಾಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಜೊತೆಗೆ ಸೇನಾ ಸಿಬ್ಬಂದಿಯ ಪತ್ನಿ ಪೂಜಾ ತಾಪಾ ಅವರೊಂದಿಗೆ ನಡೆಸಿರುವ ಸಂವಾದದ ವಿಡಿಯೊವನ್ನು ಕೂಡ ಪ್ರಧಾನಿ ಹಂಚಿಕೊಂಡಿದ್ದಾರೆ.
ಮೇಘಾಲಯದಲ್ಲಿ ನೆಲೆಸಿರುವ ಪೂಜಾ ತಾಪ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಟೆಲಿಫೋನಿಕ್ ಸಂಭಾಷಣೆ ನಡೆಸಿ ಆಯುಷ್ಮಾನ್ ಭಾರತ್ ಯೋಜನೆಯ ಬಗ್ಗೆ ಹೇಳಿಕೊಂಡಿದ್ದಾರೆ. ಅವರು ಶಿಲ್ಲಾಂಗ್‌ನಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದು, ಆಯುಷ್ಮಾನ್ ಭಾರತ್ ಯೋಜನೆ ಅವರಿಗೆ ಹೇಗೆ ಸಹಾಯ ಮಾಡಿತು ಎಂದು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಶಸ್ತ್ರಚಿಕಿತ್ಸೆ, ಔಷಧಿ ಇತ್ಯಾದಿ ಯಾವುದಕ್ಕೂ ಹಣ ಪಾವತಿಸಿಲ್ಲ. ಸಾಲವನ್ನೂ ಕೂಡ ಮಾಡಿಲ್ಲ. ಆಯುಷ್ಮಾನ್ ಭಾರತ್ ಯೋಜನೆ ಉತ್ತಮವಾಗಿದೆ ಎಂದು ಪೂಜಾ ತಾಪ ಹೇಳಿ ಕೊಂಡಿದ್ದಾರೆ.

 

2018ರ ಸೆಪ್ಟೆಂಬರ್ ತಿಂಗಳಲ್ಲಿ ಪ್ರಧಾನಿ ಮಂತ್ರಿ ಜನ ಆರೋಗ್ಯ ಯೋಜನೆ – ಆಯುಷ್ಮಾನ್ ಭಾರತ್ ಯೋಜನೆಯನ್ನು ಆರಂಭಿಸಲಾಯಿತು. ಜಗತ್ತಿನಲ್ಲಿಯೇ ಸರ್ಕಾರದ ಅತಿದೊಡ್ಡ ಆರೋಗ್ಯ ಸೇವೆ ಯೋಜನೆ ಎಂದು ಇದನ್ನು ಬಣ್ಣಿಸಲಾಗುತ್ತಿದೆ. ಆಯುಷ್ಮಾನ್ ಭಾರತ್ ಯೋಜನೆ ಅಥವಾ ಪ್ರಧಾನ್ ಮಂತ್ರಿ ಜನಾರೋಗ್ಯ ಯೋಜನೆ (ಪಿಎಂಜೆಎವೈ) ಅಥವಾ ರಾಷ್ಟ್ರೀಯ ಆರೋಗ್ಯ ಸಂರಕ್ಷಣಾ ಯೋಜನೆ ಭಾರತದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಆಯುಷ್ಮಾನ್ ಭಾರತ್ ಮಿಷನ್ ಅಡಿಯಲ್ಲಿ 2018 ರಲ್ಲಿ ಪ್ರಾರಂಭಿಸಲಾಗಿರುವ ಕೇಂದ್ರ ಪ್ರಾಯೋಜಿತ ಯೋಜನೆಯಾಗಿದೆ. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ” ಯೋಜನೆಯಡಿಯಲ್ಲಿ ರಾಜ್ಯದ ಬಿಪಿಎಲ್ ಕುಟುಂಬಗಳ ಪೈಕಿ ಅರ್.ಎಸ್.ಬಿ.ವೈ ನೋಂದಾಯಿತ ಕುಟುಂಬಗಳಿಗೆ ಮಾತ್ರ ಕೇಂದ್ರ ಸರ್ಕಾರವು ಶೇ.60 ರಷ್ಟು ಅನುದಾನ ಭರಿಸುತ್ತದೆ. ರಾಜ್ಯ ಸರ್ಕಾರವು ಶೇ.40 ರಷ್ಟು ಅನುದಾನ ಭರಿಸುತ್ತದೆ. ಇನ್ನುಳಿದ ಕುಟುಂಬಗಳಿಗೆ ರಾಜ್ಯ ಸರ್ಕಾರವೇ ಶೇ.100 ರಷ್ಟು ವೆಚ್ಚ ಭರಿಸುತ್ತದೆ.

 

-ಶ್ವೇತಾರಾಜ್ ಪುತ್ತೂರು

Tags: Ayushman BharatNarendra modiPrime minister
ShareTweetSendShare
Join us on:

Related Posts

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

ವೋಟ್ ಬಚಾವೋ ದೇಶ್ ಬಚಾವೋ: ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಕಾಂಗ್ರೆಸ್ ಮಹಾಯುದ್ಧ, ಅಕ್ಟೋಬರ್ 10ರಿಂದ ದೇಶಾದ್ಯಂತ ಅಭಿಯಾನ ಶುರು!

by Shwetha
October 7, 2026
0

ನವದೆಹಲಿ: ಭಾರತೀಯ ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮರೆಯಾಗುತ್ತಿದೆ ಮತ್ತು ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ, ಈಗ ಕೇಂದ್ರ ಸರ್ಕಾರದ ವಿರುದ್ಧ ಅಂತಿಮ ಹಂತದ...

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

SIR ಫಾರ್ಮ್‌-7 ವಿವಾದ: ಬಿಜೆಪಿ-ಜೆಡಿಎಸ್‌ ನಿಯೋಗದಿಂದ ರಾಜ್ಯಪಾಲರಿಗೆ ದೂರು, FIR ವಿರುದ್ಧ ಆಕ್ಷೇಪ

by Shwetha
October 7, 2026
0

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ Form 7 ಅರ್ಜಿಗಳ ಬಳಕೆಗೆ ಸಂಬಂಧಿಸಿದ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಬಿಜೆಪಿ ಮತ್ತು ಜೆಡಿಎಸ್‌...

ಹಾಸನ ಡಿಸಿ ಮತ್ತು ಎಸ್​ಪಿ ಜಟಾಪಟಿಗೆ ಹೆಚ್ ಡಿ ರೇವಣ್ಣ ಎಂಟ್ರಿ: ಅಧಿಕಾರಿಗಳನ್ನು ಹೇಗೆ ರಿಪೇರಿ ಮಾಡಬೇಕೆಂದು ನಮಗೆ ಗೊತ್ತಿದೆ ಎಂದು ವಾರ್ನಿಂಗ್

ಹಾಸನ ಡಿಸಿ ಮತ್ತು ಎಸ್​ಪಿ ಜಟಾಪಟಿಗೆ ಹೆಚ್ ಡಿ ರೇವಣ್ಣ ಎಂಟ್ರಿ: ಅಧಿಕಾರಿಗಳನ್ನು ಹೇಗೆ ರಿಪೇರಿ ಮಾಡಬೇಕೆಂದು ನಮಗೆ ಗೊತ್ತಿದೆ ಎಂದು ವಾರ್ನಿಂಗ್

by Shwetha
October 7, 2026
0

ಹಾಸನ: ಹಾಸನ ಜಿಲ್ಲಾಡಳಿತದ ಇತಿಹಾಸದಲ್ಲೇ ಹಿಂದೆಂದೂ ಕಾಣದ ರೀತಿಯಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಡುವೆ ಶೀತಲ ಸಮರ ಸ್ಫೋಟಗೊಂಡಿದೆ. ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಗಣಪತಿ ವಿಸರ್ಜನೆಗೆ...

FSSAI ವಿರುದ್ಧದ ಕಾನೂನು ಸಮರದಲ್ಲಿ ರಿಲಯನ್ಸ್‌ಗೆ ತಾತ್ಕಾಲಿಕ ಜಯ: ‘ಎನರ್ಜಿ ಡ್ರಿಂಕ್’ ಆಗಿ ಕ್ಯಾಂಪಾ ಮಾರಾಟಕ್ಕೆ ಹೈಕೋರ್ಟ್ ಅನುಮತಿ

FSSAI ವಿರುದ್ಧದ ಕಾನೂನು ಸಮರದಲ್ಲಿ ರಿಲಯನ್ಸ್‌ಗೆ ತಾತ್ಕಾಲಿಕ ಜಯ: ‘ಎನರ್ಜಿ ಡ್ರಿಂಕ್’ ಆಗಿ ಕ್ಯಾಂಪಾ ಮಾರಾಟಕ್ಕೆ ಹೈಕೋರ್ಟ್ ಅನುಮತಿ

by Shwetha
October 7, 2026
0

ಕ್ಯಾಂಪಾ ಪಾನೀಯಗಳನ್ನು ‘ಎನರ್ಜಿ ಡ್ರಿಂಕ್’ ಎಂದು ಮಾರಾಟ ಮಾಡುವುದಕ್ಕೆ ಸಂಬಂಧಿಸಿದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಹಾಗೂ ರಿಲಯನ್ಸ್ ಇಂಡಸ್ಟ್ರೀಸ್ ನಡುವಿನ ಕಾನೂನು ಸಮರದಲ್ಲಿ...

ದೆಹಲಿ ಚಲೋ ತಡೆಯಲು ಪೊಲೀಸರ ಬೆದರಿಕೆ ತಂತ್ರ: ಅಕ್ಟೋಬರ್ 10 ರ ಪ್ರತಿಭಟನೆಗೆ ಅಡ್ಡಿಪಡಿಸುತ್ತಿರುವ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

ದೆಹಲಿ ಚಲೋ ತಡೆಯಲು ಪೊಲೀಸರ ಬೆದರಿಕೆ ತಂತ್ರ: ಅಕ್ಟೋಬರ್ 10 ರ ಪ್ರತಿಭಟನೆಗೆ ಅಡ್ಡಿಪಡಿಸುತ್ತಿರುವ ಸರ್ಕಾರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

by Shwetha
October 7, 2026
0

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ಮತ್ತು ಪೊಲೀಸ್ ಇಲಾಖೆ ಸಂಚು ರೂಪಿಸಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram