ಪಶ್ಚಿಮ ಬಂಗಾಳ ಸಚಿವ ಸುಬ್ರತಾ ಮುಖರ್ಜಿ ನಿಧನ
ಕೋಲ್ಕತ್ತಾ : ಟಿಎಂಸಿ ಪಕ್ಷದ ಹಿರಿಯ ನಾಯಕ ಮತ್ತು ಪಶ್ಚಿಮ ಬಂಗಾಳ ಸಚಿವ ಸುಬ್ರಾತಾ ಮುಖರ್ಜಿ ನಿಧನರಾಗಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಕೊಲ್ಕತ್ತಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತು.
ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
75 ವರ್ಷ ವಯಸ್ಸಿನ ಸುಬ್ರತಾ ಮುಖರ್ಜಿ ಅವರು ರಾಜ್ಯ ಪಂಚಾಯತ್ ಸಚಿವರಾಗಿದ್ದರು. ಇವರು ಪತ್ನಿಯನ್ನು ಅಗಲಿದ್ದಾರೆ.
ಸುಬ್ರತಾ ಮುಖರ್ಜಿ ಅವರ ಪಾರ್ಥಿವ ಶರೀರವನ್ನು ಸರ್ಕಾರದ ರವೀಂದ್ರ ಸದನ ಸಭಾಂಗಣದಲ್ಲಿ ಇರಿಸಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.