ಕೋವಿಡ್ ಸಂಕಷ್ಟ – ಫೇಸ್ ಬುಕ್ ಲೈವ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಕಿರುತೆರೆ ನಟ
ದೇಶಾದ್ಯಂತ ಕೋವಿಡ್ 2ನೇ ಅಲೆಗೆ ಜನ ತತ್ತರಿಸಿಹೋಗಿದ್ದಾರೆ.. ಲಾಕ್ ಡೌನ್ ನಿಂದಾಗಿ ಬಡವರು ಅದ್ರಲ್ಲೂ ಸಿನಿಮಾರಂಗದವರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.. ಹೀಗೆಯೇ ಲಾಕ್ ಡೌನ್ ವೇಳೆ ಕೆಲಸವಿಲ್ಲದೇ ಜೀವನದಲ್ಲಿ ಜಿಗುಪ್ಸೆಗೊಂಡ ಬೆಂಗಾಲಿ ಕಿರುತೆರೆ ನಟರೊಬ್ಬರು ಫೇಸ್ ಬುಕ್ ಲೈವ್ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಜೀವನದಲ್ಲಿ ಜಿಗುಪ್ಸೆಗೊಂಡು ನಟ ಸುವೋ ಚಕ್ರವರ್ತಿ ಫೇಸ್ ಬುಕ್ ಲೈವ್ ನಲ್ಲಿದ್ದಾಗಲೇ ನಿದ್ದೆ ಮಾತ್ರೆ ತೆಗೆದುಕೊಂಡು ಸಾವಿನ ದಾರಿ ಹಿಡಿಯಲು ಮುಂದಾಗಿದ್ದಾರೆ. ಲೈವ್ ನಲ್ಲಿ ನಟ, ಯಾಕೋ ಗೊತ್ತಿಲ್ಲ ನನಗೆ ಕಟ್ಟಡದಿಂದ ಹಾರಿ, ಕೈ ಕಟ್ ಮಾಡಿಕೊಂಡು ಹಿಂಸಾತ್ಮಕವಾಗಿ ಸಾಯಲು ಮನಸ್ಸಿಲ್ಲ.
ಇದು ನನಗೆ ಇಷ್ಟನೂ ಇಲ್ಲ. ನನಗೆ ಕೊನೆಯ ಆಯ್ಕೆ ಸಿಕ್ಕಿದ್ದು ನಿದ್ದೆ ಮಾತ್ರೆ. ಹೀಗಾಗಿ ನಿದ್ದೆ ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ಯಾರಿಗೆ ಅತೀ ಹೆಚ್ಚು ಬಿಪಿ ಇದೆಯೋ ಅವರು ಹೃದಯಾಘಾತವಾಗಿ ಸಾಯುತ್ತಾರೆ ಎಂದು ಲೈವ್ ನಲ್ಲಿ ಅಭಿಮಾನಿಗಳ ಜೊತೆ ಹೇಳಿಕೊಂಡಿದ್ದಾರೆ.
ನಟನ ಮಾತುಗಳನ್ನು ಕೇಳಿದ ಅಭಿಮಾನಿಗಳು ಶಾಕ್ ಆಗಿದ್ದಾರೆ. ಬಳಿಕ ಸ್ಥಳೀಯ ಪೊಲಿಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಇತ್ತ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ನಟನನ್ನ ಆಸ್ಪತ್ರೆಗೆ ಸೇರಿಸಿದ್ದಾರೆ. ಅಲ್ಲದೇ ಆತ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.