ಸನ್ನಡತೆ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 125 ಕೈದಿಗಳ ಬಿಡುಗಡೆ
ಬೆಂಗಳೂರು : ಸನ್ನಡತೆ ಆಧಾರದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 125 ಕೈದಿಗಳನ್ನ ರಿಲೀಸ್ ಮಾಡಲಾಗಿದೆ. ರಾಜ್ಯದ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 18 ಮಹಿಳಾ ಕೈದಿಗಳು ಸೇರಿದಂತೆ 125 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ರಿಲೀಸ್ ಮಾಡಲಾಗಿದೆ. ಕಲಬುರ್ಗಿ, ಧಾರವಾಡ, ಮೈಸೂರು, ಬೆಳಗಾವಿ, ವಿಜಯಪುರ, ಬಳ್ಳಾರಿ ಕೇಂದ್ರ ಕಾರಾಗೃಹಗಳಲ್ಲಿ ಅಧಿಕಾರಿಗಳು ಕೈದಿಗಳುಗೆ ಪ್ರಮಾಣ ಪತ್ರ ನೀಡಿ ಅವರನ್ನ ಕಳುಹಿಸಿಕೊಟ್ಟಿದ್ದಾರೆ.
ಉತ್ತಮ ನಡತೆ ತೋರಿದ್ದ ಕೈದಿಗಳ ಬಿಡುಗಡೆಗಾಗಿ ಕಾರಾಗೃಹಗಳ ಸ್ಥಾಯಿ ಸಲಹಾ ಮಂಡಳಿಗಳ ವರದಿ ಸಮೇತ ಇಲಾಖೆಯಿಂದ ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಲಾಗಿತ್ತು. ಕೈದಿಗಳ ಬಿಡುಗಡೆಗೆ ಅನುಮೋದನೆ ನೀಡಿದ್ದ ಸರ್ಕಾರ, ರಾಜ್ಯಪಾಲರಿಗೆ ಪಟ್ಟಿ ಕಳುಹಿಸಿತ್ತು. ಅದನ್ನು ಪರಿಸೀಲಿಸಿದ್ದ ರಾಜ್ಯಪಾಲರು, 125 ಕೈದಿಗಳ ಬಿಡುಗಡೆಗೆ ಒಪ್ಪಿಗೆ ನೀಡಿದ್ದರು. ಅದ್ರಂತೆ ಈಗ 125 ಕೈದಿಗಳು ರಿಲೀಸ್ ಆಗಿ ಜೈಲಿನಿಂದ ಹೊರಬಂದಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.