ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ, ನಾಲ್ಕು ಮಂದಿ ಸಾವು
ಬೆಂಗಳೂರು ಹೊರವಲಯದ ನೈಸ್ ರಸ್ತೆಯಲ್ಲಿ ಘಟನೆ
ಫಾದಿಲ್, ಅಭಿಲಾಶ್, ಶಿಲ್ಪಾ ಮೃತರು, ನಾಲ್ವರ ಸ್ಥಿತಿ ಗಂಭೀರ
ಬೆಂಗಳೂರು : ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯದಲ್ಲಿರುವ ನೈಸ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಕಾರಿನಲ್ಲಿದ್ದ ಮೊಹಮ್ಮದ್ ಫಾದಿಲ್, ಅಭಿಲಾಷ್ ಮತ್ತು ಶಿಲ್ಪಾ(30) ಮೃತ ದುರ್ದೈವಿಗಳಾಗಿದ್ದು, ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ.
ಇನ್ನು ಮತ್ತೊಂದು ಕ್ವಾಲಿಸ್ ಕಾರಲ್ಲಿದ್ದ ನಾಲ್ವರ ಸ್ಥಿತಿಯೂ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಕುಮಾರಸ್ವಾಮಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬನ್ನೇರುಘಟ್ಟ ಮಾರ್ಗದಿಂದ ಬರುತ್ತಿದ್ದ ವ್ಯಾಗನರ್ ಕಾರಿಗೆ ಲಾರಿ ಬಂದು ಡಿಕ್ಕಿ ಹೊಡೆದ ರಭಸಕ್ಕೆ ಕಾರು ನುಜ್ಜು ಗುಜ್ಜಾಗಿದೆ. ಅಲ್ಲದೇ ಕಾರಿನಲ್ಲಿದ್ದ ನಾಲ್ವರು ಕೊನೆಯುಸಿರೆಳೆದಿದ್ದಾರೆ.
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ವ್ಯಾಗನರ್ ಕಾರು, ಮುಂದೆ ಚಲಿಸುತ್ತಿದ್ದ ಕ್ವಾಲಿಸ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ, ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದೆ.