ಬೆಂಗಳೂರು ವಿಮಾನ ನಿಲ್ದಾಣ ಖಾಸಗೀಕರಣ.!!

1 min read
bengaluru

ಬೆಂಗಳೂರು ವಿಮಾನ ನಿಲ್ದಾಣ ಖಾಸಗೀಕರಣ.!!

ನವದೆಹಲಿ : ಕೇಂದ್ರ ಸರ್ಕಾರ ಬೆಂಗಳೂರು ಸೇರಿದಂತೆ 13 ವಿಮಾನ ನಿಲ್ದಾಣಗಳಲ್ಲಿರುವ ತನ್ನ ಷೇರುಗಳನ್ನ ಮಾರಾಟ ಮಾಡುಲು ಮುಂದಾಗಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ಬೆಂಗಳೂರು, ದೆಹಲಿ, ಮುಂಬೈ ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳಲ್ಲಿನ ತನ್ನ ಉಳಿಕೆ ಪಾಲಿನ ಷೇರನ್ನೂ ಮಾರಾಟ ಮಾಡಲು ಯೋಜನೆ ರೂಪಿಸಿದೆ ಎಂದು ವರದಿಯಾಗಿದೆ.

ಕೇಂದ್ರ ಸರ್ಕಾರ 2021-22ರ ಹಣಕಾಸು ವರ್ಷದಲ್ಲಿ ಆಸ್ತಿಗಳ ನಗದೀಕರಣದ ಮೂಲಕ 2.5 ಲಕ್ಷ ಕೋಟಿ ರೂ. ಸಂಗ್ರಹಣೆ ಸಂಬಂಧ ತನ್ನ ಪಾಲನ್ನು ಮಾರಾಟ ಮಾಡಲು ಸಿದ್ಧತೆ ನಡೆಸಿದೆ.

bengaluru

ಅಂದಹಾಗೆ ಕೇಂದ್ರ ಸರ್ಕಾರ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೇಕಡಾ 13 ಷೇರನ್ನ ಹೊಂದಿದೆ.

ವಿಮಾನ ನಿಲ್ದಾಣಗಳ ಖಾಸಗೀಕರಣ ಪ್ರಕ್ರಿಯೆಗಳನ್ನು ಈಗಾಗಲೇ ಸಚಿವಾಲಯ ಆರಂಭಿಸಿದೆ.

ಕಳೆದ ವರ್ಷ ನಡೆದ ಮೊದಲ ಹಂತದ ಖಾಸಗೀಕರಣದಲ್ಲಿ ಮಂಗಳೂರು, ಲಕ್ನೋ, ಅಹಮದಾಬಾದ್, ಜೈಪುರ, ಗುವಾಹಟಿ ಮತ್ತು ತಿರುವನಂತಪುರ ಸೇರಿ 6 ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್ ತನ್ನ ತೆಕ್ಕೆಗೆ ಪಡೆದುಕೊಂಡಿತ್ತು.

Motera stadium
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd