8 ಬಾರಿಗೆ ನೋಟಿಸ್ : ವಿಚಾರಣೆಗೆ ಹಾಜರಾಗ್ತಾರಾ ಸಿಡಿ ಲೇಡಿ
ಬೆಂಗಳೂರು : ಮಾಜಿ ಸಚಿವರ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಎಸ್ ಐಟಿ ಎಂಟನೇ ಬಾರಿ ನೋಟಿಸ್ ಜಾರಿ ಮಾಡಿದೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಯುವತಿ ದೂರು ನೀಡಿದ್ದ ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.
ನೋಟಿಸ್ ಪ್ರಕಾರ ಇಂದು ಬೆಳಗ್ಗೆ 10 ಗಂಟೆಗೆ ಕಬ್ಬನ್ ಪಾರ್ಕ್ ಠಾಣೆಗೆ ಯುವತಿ ಹಾಜರಾಗಬೇಕಿದೆ. ಒಂದು ವೇಳೆ ಆಕೆ ಪ್ರತ್ಯೇಕ ಸ್ಥಳದಲ್ಲಿ ಹೇಳಿಕೆ ನೀಡಲು ಇಚ್ಛಿಸಿದರೆ ಸೂಚಿಸಿದ ಸ್ಥಳಕ್ಕೆ ಮಹಿಳಾ ಪೊಲೀಸ್ ಸಿಬ್ಬಂದಿ ತೆರಳಿ ಯುವತಿಯ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ.
ಇನ್ನು ಜೀವ ಬೆದರಿಕೆ ಆರೋಪ ಮಾಡಿರುವ ಹಿನ್ನೆಲೆ ಯುವತಿಯ ಭದ್ರತೆಗೆ 8 ಜನ ಪೊಲೀಸರ ತಂಡ ಸಿದ್ಧವಾಗಿದೆ.
ಎಸ್ ಐ ಟಿಯಿಂದ ಮಹಿಳಾ ಪೊಲೀಸ್ ಸಿಬ್ಬಂದಿ ತಂಡ ರಚನೆ ಮಾಡಲಾಗಿದೆ. ತಂಡದಲ್ಲಿ ಓರ್ವ ಮಹಿಳಾ ಸಬ್ ಇನ್‍ಸ್ಪೆಕ್ಟರ್ ಸೇರಿದಂತೆ 8 ಮಂದಿ ಪೊಲೀಸರಿದ್ದಾರೆ