ರಾಜ್ಯದಲ್ಲಿ ಕೊರೊನಾ ಬ್ಲಾಸ್ಟ್ – ಒಂದೇ ದಿನ 39,047 ಜನರಿಗೆ ಸೋಂಕು..!
ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೊನಾ ಹೆಮ್ಮಾರಿಯ ಅಟ್ಟಹಾಸ ಉತಯ್ತುಂಗಕ್ಕೇರಿದೆ. ಒಂದೇ ದಿನ ರಾಜ್ಯದಲ್ಲಿ 39,047 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಸರ್ವಕಾಲೀನ ದಾಖಲೆ ಬರಿದಿದೆ.
ಒಂದೇ ದಿನ 229 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 14,39,882ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 15,036ಕ್ಕೆ ತಲುಪಿದೆ.
ರಾಜ್ಯದಲ್ಲಿ ಒಂದೇ ದಿನ ದಾಖಲೆಯ 11,833 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 10,95,883ಕ್ಕೆ ಏರಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 3,28,884ಕ್ಕೆ ಜಿಗಿತ ಕಂಡಿದೆ. ಕೇವಲ ಬೆಂಗಳೂರಿನಲ್ಲೇ 22,596 ಮಂದಿಗೆ ಸೋಂಕು ತಗುಲಿದ್ದು, 137 ಮಂದಿ ಒಂದೇ ದಿನದಲ್ಲಿ ಕೊರೊನಾಗೆ ಬಲಿಯಾಗಿದ್ದಾರೆ.








