ಸಿಲಿಕಾನ್ ಸಿಟಿಯಲ್ಲಿ ಮುಂದುವರೆದ ಮಹಾಮಾರಿಯ ಅಟ್ಟಹಾಸ – ಕಂಟೈನ್ಮೆಂಟ್ ಝೋನ್ ಗಳ ಸಂಖ್ಯೆ 162ಕ್ಕೆ ಏರಿಕೆ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಮಹಾಮಾರಿ ಕಾಟ ಹೆಚ್ಚಾಗ್ತಾಯಿದೆ.. ಹೆಮ್ಮಾರಿಯ ಕಾಟದಿಂದ ಸಿಲಿಕಾನ್ ಸಿಟಿ ಮಂದಿ ಆತಂಕಕ್ಕೆ ಒಳಗಾಗಿದ್ದಾರೆ.. 3ನೇ ಅಲೆ ಆತಂಕದಲ್ಲಿ ದುಪ್ಪಟ್ಟು ಕೇಸ್ ಗಳು ದಾಖಲಾಗುವ ಎಚ್ಚರಿಕೆ ನೀಡಲಾಗಿದ್ದು, ಇದರ ಆರಂಭ ಆಗಿದ್ಯಾ ಅನ್ನೋ ಅನುಮಾನ ಶುರುವಾಗಿದೆ.. ಈ ನಡುವೆ ಬ್ಲಾಕ್ ಫಂಗಸ್ ಕಾಟ, ಜೊತೆಗೆ ಡೆಲ್ಟಾ ಪ್ಲಸ್ ಆತಂಕ ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಮತ್ತೆ ಮೂವರಲ್ಲಿ ಡೆಲ್ಟಾ ಪ್ಲಸ್ ಸೋಂಕು ದೃಢಪಟ್ಟಿದೆ.
ಕೊರೊನಾ 3ನೇ ಅಲೆ ಹಾಗೂ ಡೆಲ್ಟಾ ವೈರಸ್ ಗಳ ನಡುವೆ ಬೆಂಗಳೂರಿನಲ್ಲಿ ಮೈಕ್ರೋ ಕಂಟೈನ್ಮೆಂಟ್ ವಲಯಗಳನ್ನು 162ಕ್ಕೆ ಏರಿಕೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಹಲವು ವಾರ್ಡ್ ಗಳಲ್ಲಿ ಕಳೆದ 10 ದಿನಗಳಲ್ಲಿ ಕೋವಿಡ್ ಕೇಸ್ ಹೆಚ್ಚಾಗುತ್ತಿದ್ದು, ಮಹದೇವಪುರದಲ್ಲಿ 42 ಪ್ರಕರಣ ಪತ್ತೆಯಾಗಿದ್ದರೆ, ಪೂರ್ವ ವಲಯದಲ್ಲಿ 38, ಬೊಮ್ಮನಹಳ್ಳಿಯಲ್ಲಿ 28, ದಕ್ಷಿಣ ವಲಯದಲ್ಲಿ 19, ಯಲಹಂಕದಲ್ಲಿ 17, ರಾಜರಾಜೇಶ್ವರಿನಗರ 7, ಬೆಳ್ಳಂದೂರು, ಬೇಗೂರು 8 ಪ್ರಕರಣಗಳು ದಾಖಲಾಗಿವೆ.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಬಿಎಸ್ ವೈಗೆ `ಸಂಪುಟ ದರ್ಜೆಯ ಸ್ಥಾನ’
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.