ರಾಜ್ಯದಲ್ಲಿ ಸೋಂಕಿತರು, ಸಾವಿನ ಸಂಖ್ಯೆಯಲ್ಲಿ ಇಳಿಮುಖ..!
ಬೆಂಗಳೂರು: ರಾಜ್ಯ ಹಾಗೂ ಬೆಂಗಳೂರಿನಲ್ಲಿ ಕ್ರಮೇಣ ಕೋವಿಡ್ 2ನೇ ಅಲೆಯ ಆರ್ಭಟ ಕಡಿಮೆಯಾಗಿದೆ.. ಸೋಂಕಿತರು ಸಾವಿನ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದ್ದು, ಇಂದು 8,249 ಹೊಸ ಕೇಸ್ ಗಳು ಪತ್ತೆಯಾಗಿದೆ.
ಇನ್ನೂ ಬೆಂಗಳೂರಿನಲ್ಲಿ ಇಂದು 1,154 ಜನರಿಗೆ ಕೊರೋನಾ ಪಾಸಿಟಿವ್ ಇರುವುದು ಖಚಿತವಾಗಿದೆ.
ರಾಜ್ಯದಲ್ಲಿ ಪಾಸಿಟಿವಿಟಿ ಶೇಕಡ 5 ರಿಂದ ಶೇಕಡ 4.86 ಕ್ಕೆ ಇಳಿಕೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ 4769 ಸೇರಿದಂತೆ ರಾಜ್ಯದಲ್ಲಿ 14,945 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಗುಣಮುಖರಾದವರ ಸಂಖ್ಯೆ 25 ಲಕ್ಷ ದಾಟಿದೆ ಎನ್ನಲಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.