ಪತಿಯೊಬ್ಬ ತನ್ನ ಮೂರು ತಿಂಗಳ ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಕೊಲೆಗೆ ಯತ್ನಿಸಿದ್ದು , ಎರಡೂವರೆ ವರ್ಷದ ತನ್ನ ಪುಟ್ಟ ಮಗುವನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ.. ಈ ಘಟನೆ ನಡೆದಿರೋದು ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ..
ಗಾಯಾಳು ಪತ್ನಿ ಮೀನಾ(23) ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.. ಈಕೆ ಆರೋಪಿ ಬಾಬು (37) ಎಂಬಾತನನ್ನ ಎರಡನೇ ಮದುವೆ ಆಗಿದ್ದರು..
ಏಳು ವರ್ಷದ ಹಿಂದೆ ವಿಜಯಕಾಂತ ಎಂಬುವವರನ್ನ ವರಿಸಿದ್ದ ಮೀನಾಗೆ ಮೂವರು ಹೆಣ್ಣು ಮಕ್ಕಳಿದ್ದಾರೆ. ಆದ್ರೆ ಮೂರು ವರ್ಷದ ಹಿಂದೆ ವಿಜಯಕಾಂತ್ ಮೃತಪಟ್ಟಿದ್ದರು.. ನಂತರ ಮೀನಾಗೆ ಬಾಬು ಎಂಬಾತನ ಪರಿಚಯವಾಗಿತ್ತು..
ಆತನ ಜೊತೆಗೆಎ ಮೀನಾ 2ನೇ ಮದುವೆ ಆಗಿದ್ದರು.. ಬೈಯಪ್ಪನಹಳ್ಳಿಯಲ್ಲಿ ಒಂದು ವರ್ಷದಿಂದ ವಾಸವಿದ್ದಾರೆ.. ಬಾಬು ಮೀನಾ ಕೂಲಿ ಮಾಡಿ ಕೂಡಿಟ್ಟ ಹಣವನ್ನು ಕುಡಿದು ಹಾಳು ಮಾಡ್ತಿದ್ದ ಎನ್ನಲಾಗಿದೆ.
ಇದೇ ವಿಚಾರಕ್ಕೆ ಜಗಳವಾಗಿ ದುಡ್ಡು ಕೇಳಿದಕ್ಕೆ ಮೈಮೇಲೆ ಡೀಸೆಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ.. ಅಲ್ಲದೇ ಮೀನಾ ಮೊದಲ ಪತಿಗೆ ಜನಿಸಿದ್ದ ಪುಟ್ಟ ಹೆಣ್ಣು ಮಗುವನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ.. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.








