ಬೆಂಗಳೂರು : ಚಾಕು ತೋರಿಸಿ ಮೊಬೈಲ್ ಹಣ ದೋಚುತ್ತಿದ್ದ ಆರೋಪಿಗಳನ್ನ ಬಂಧಿಸುವಲ್ಲಿ ಕೆಂಗೇರಿ ಪೊಲೀಸರು ಯಶಸ್ವಿಯಾಗಿದ್ದಾರೆ..
ಸಲ್ಮಾನ್ ಹಾಗೂ ಇಂಜಮಾಮ್ ಬಂಧಿತ ಆರೋಪಿಗಳಾಗಿದ್ದಾರೆ. ಕೆಂಗೇರಿ ಠಾಣಾ ವ್ಯಾಪ್ತಿಯಲ್ಲಿ ಚಾಕು ತೋರಿಸಿ ಐಫೋನ್ ಕಿತ್ತು ಎಸ್ಕೇಪ್ ಆಗ್ತಿದ್ದ ಆರೋಪಿಗಳು ಅಂದರ್ ಆಗಿದ್ದಾರೆ..
ಪ್ರಕರಣ ದಾಖಲಿಸಿ ಕಾರ್ಯಾಚರಣೆ ಆರಂಭಿಸಿದ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ,. ಈ ಖದೀಮರು ಈ ಹಿಂದೆ ಎಸ್ ಆರ್ ನಗರ, ಬನಶಂಕರಿ ಸೇರಿದಂತೆ ಹಲವು ಠಾಣಾ ವ್ಯಾಪ್ತಿಯಲ್ಲಿ ಕೈಚಳಕ ತೋರಿದ್ದರು.
ಬಂಧಿತರಿಂದ ಒಂದು ಲಕ್ಷ ಮೌಲ್ಯದ ಐಫೋನ್ ಮತ್ತು ಮಾರಕಾಸ್ತ್ರ ಜಪ್ತಿ ಮಾಡಲಾಗಿದೆ.