ಹೊಸ ವರ್ಷವನ್ನು ಸ್ವಾಗತಿಸಲು ಬೆಂಗಳೂರು ಸಜ್ಜಾಗುತ್ತಿದೆ.ಹೊಸ ವರ್ಷಾಚರಣೆಯ ಸಂಭ್ರಮಾಚರಣೆಯ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಸಕಲ ಸಿದ್ಧತೆ ಕೈಗೊಂಡಿದ್ದಾರೆ. ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್ ಸೇರಿದಂತೆ ಇತರ ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಭದ್ರತೆಯ ದೃಷ್ಟಿಯಿಂದ ಒಟ್ಟು 11,830 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಏನಾದರೂ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಪೊಲೀಸ್ ಸಹಾಯವಾಣಿ ಸಂಖ್ಯೆ 112ಕ್ಕೆ ಮಾಹಿತಿ ನೀಡಲು ಕೋರಲಾಗಿದೆ.
ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ
ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ....








