ಬೆಂಗಳೂರು: ಬಹೃತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಬೃಹತ್ ಹಗರಣವೊಂದು ನಡೆದಿರುವ ಆರೋಪ ಕೇಳಿಬಮದಿದೆ. 2015 ರಿಂದ 2020ರ ತನಕ ನಡೆದ ಕಾಮಗಾರಿಗಳ ಗುತ್ತಿಗೆಯನ್ನು ಒಂದೇ ಸಂಸ್ಥೆಗೆ ನೀಡಲಾಗಿದೆ ಎಂಬ ಗಂಭಿರವಾದ ಆರೋಪ ಬಿಬಿಎಂಪಿ ವಿರುದ್ಧ ಕೇಳಿಬಂದಿದೆ.
ಈ ಬಗ್ಗೆ ಅಂಕಿ-ಅಂಶಗಳ ಸಮೇತ ಮಾಹಿತಿಯನ್ನು ಬೆಂಗಳೂರು ನವ ನಿರ್ಮಾಣ ಪಕ್ಷ ಬಹಿರಂಗಪಡಿಸಿದೆ. ಅಷ್ಟೇ ಅಲ್ಲ ಬಿಬಿಎಂಯಲ್ಲಿ ನಡೆದ 4ಜಿ ಮಾದರಿಯ ಹಗರಣವಿದು ಎಂದು ಉಲ್ಲೇಖಿಸಿ ಪಕ್ಷದ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನರಸಿಂಹನ್ ಗಂಭೀರ ಆರೋಪ ಮಾಡಿದ್ದಾರೆ.
ಕಳೆದ 5 ವರ್ಷಗಳಲ್ಲಿ 28,314 ವಿವಿಧ ಯೋಜನೆಗಳ ಕಾಮಗಾರಿಯನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮಕ್ಕೆ ನೀಡಲಾಗಿದೆ. ಕೆಲವೊಂದು ಕಾಮಗಾರಿಗೆ ಟೆಂಡರ್ ಕರೆಯದೇ ನೇರವಾಗಿ ನೀಡಲಾಗಿದೆ ಎನ್ನಲಾಗಿದ್ದು, ಇದಕ್ಕಾಗಿ ಶೇ 10ರಷ್ಟು ಕಮೀಷನ್ ಪಡೆಯಲಾಗಿದೆ ಎಂಬ ಆರೋಪ ಬಂದಿದೆ.








