ಬೆಂಗಳೂರಿಗರೇ ಎಚ್ಚರ… ಪ್ರತಿ ಗಂಟೆಗೆ 2000 ಮಂದಿ ಸೋಂಕಿಗೆ ತುತ್ತಾಗುತ್ತಿದ್ದಾರೆ..
ಬೆಂಗಳೂರು : ರಾಜ್ಯದಲ್ಲಿ ಅದ್ರಲ್ಲೂ ಬೆಂಗಳೂರಿನಲ್ಲಿ ಕೊರೊನಾ ಅಬ್ಬರಿಸುತ್ತಿದ್ದು, ಪ್ರತಿ ದಿನ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ನಡುವೆ ಬೆಂಗಳೂರಿಗರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಸಿಕ್ಕಿದೆ. ಪ್ರತಿ ಒಂದು ಗಂಟೆಗೆ 2000 ಮಂದಿಗೆ ಸೋಂಕು ಕಾಣಿಸಿಕೊಳ್ಳುತ್ತಿದೆ. ಇದರ ಜೊತೆಗೆ ಸಾವಿನ ಪ್ರಮಾಣವೂ ಏರಿಕೆಯಾಗುತ್ತಿದೆ.
ಸಿಲಿಕಾನ್ ಸಿಟಿ ಕೊರೊನಾ ಹಾಟ್ಸ್ಪಾಟ್ ಆಗಿದೆ. ನಿನ್ನೆ ಒಂದೆ ದಿನ ರಾಜ್ಯದಲ್ಲಿ 592 ಮಂದಿ ಸೋಂಕಿಗೆ ಬಲಿಯಾಗಿದ್ದರೆ. ಬೆಂಗಳೂರೊಂದರಲ್ಲೇ 346 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ನಡುವೆ ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ 30.69ಕ್ಕೆ ಕ್ಕೇರಿದೆ. ಬೆಂಗಳೂರಿನಲ್ಲಿ ಪ್ರತಿ 100ರಲ್ಲಿ ಸುಮಾರು 30 ರಿಂದ 40 ಮಂದಿಗೆ ಕೊರೊನಾ ಸೋಂಕು ತಗುಲುತ್ತಿದೆ ಎಂಬ ಾಘಾತಕಾರಿ ವಿಚಾರ ಬಹಿರಂಗವಾಗಿದೆ.
ಮತ್ತೊಂದೆಡೆ ಬೇರೆ ಬೇರೆ ಊರಿಗಳಿಂದ ದುಡಿಯುವುದಕ್ಕೆ ಬೆಂಗಳೂರಿಗೆ ಬಂದಿದ್ದ ಶ್ರಮಜೀವಿಗಳು , ವಲಸೆ ಕಾರ್ಮಿಕರು ಬೆಂಗಳೂರು ಬಿಟ್ಟು ತಮ್ಮ ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಈ ನಡುವೆ ರಾಜ್ಯ ಸರ್ಕಾರವೂ ಜನತಾ ಕರ್ಫ್ಯೂನಿಂದ ಯಾವುದೇ ಉಪಯೋಗವಿಲ್ಲ ಎಂಬ ಚಿಂತನೆಗೆ ಬಂದಿದ್ದು, ಮೇ 10 ರಿಂದ 25 ರವರೆಗೂ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ.
ಬೆಳ್ಳಂ ಬೆಳಿಗ್ಗೆ ಮನೆಗೆ ನುಗ್ಗಿ ಅವಿತು ಕುಳಿತಿದ್ದ ಚಿರತೆ ಸೆರೆ








