ನಟ ನಿಖಿಲ್ ಕುಮಾರಸ್ವಾಮಿಗೆ ಕೊರೊನಾ ಪಾಸಿಟಿವ್
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟ ಬೆನ್ನಲ್ಲೆ ಅವ್ರ ಪುತ್ರ ನಟ ನಿಖಿಲ್ ಕುಮಾರಸ್ವಾಮಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.
ಈ ಕುರಿತು ಸ್ವತಃ ಅವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದು, ನಾನು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು ಪ್ರಾಥಮಿಕ ವರದಿ ಪಾಸಿಟಿವ್ ಬಂದಿದೆ. ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ. ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆಗೆ ಒಳಗಾಗಿ” ಎಂದು ತಿಳಿಸಿದ್ದಾರೆ.
ಇದೇ ವೇಳೆ ತಮ್ಮ ತಂದೆಗೆ ಸೋಂಕು ತಗುಲಿರುವ ಬಗ್ಗೆ ಟ್ವೀಟ್ ಮಾಡಿ, “ಮಾಜಿ ಮುಖ್ಯಮಂತ್ರಿಗಳು ಹಾಗೂ ನನ್ನ ತಂದೆ ಕುಮಾರಸ್ವಾಮಿ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಈಗಾಗಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿಮ್ಮೆಲ್ಲರ ಪ್ರೀತಿ ಮತ್ತು ದೇವರ ದಯೆಯಿಂದ ಆದಷ್ಟು ಬೇಗ ಗುಣಮುಖರಾಗಲಿದ್ದಾರೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ಯಾವುದೇ ಆತಂಕ ಬೇಡ ಎಂದು ಮನವಿ ಮಾಡಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.








