ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಮಿಷನರ್ ಭಾಸ್ಕರ್ ಅವರೊಂದಿಗೆ ಇನ್ನೂ ಇಬ್ಬರನ್ನೂ ವರ್ಗಾವಣೆ ಮಾಡಲಾಗಿದೆ. ಇನ್ನೂ ಭಾಸ್ಕರ್ ರಾವ್ ಅವರ ಬದಲಾಗಿ ನೂತನ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಗುಪ್ತಚರ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕರಾಗಿದ್ದ ಕಮಲ್ ಪಂತ್ ಅವರನ್ನು ನೇಮಕ ಮಾಡಲಾಗಿದೆ. ಕಮಲ್ ಪಂತ್ ಅವರಿಂದ ತೆರವಾಗಿದ್ದ ಗುಪ್ತಚರ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕರ ಸ್ಥಾನಕ್ಕೆ ಅಪರಾಧ ತನಿಖೆ ಇಲಾಖೆಯ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಬಿ. ದಯಾನಂದ ಅವರನ್ನು ನೇಮಿಸಲಾಗಿದೆ. ಇನ್ನೂ ತಕ್ಷಣದಿಂದಲೇ ಜಾರಿಗೆ ಬರುವಂತೆ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕರಾಗಿ ನೇಮಕಗೊಳಿಸುವಂತೆ ಸರ್ಕಾರ ಆದೇಶಿಸಿದೆ.
ನಾಳೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ
ಬೆಂಗಳೂರು: ಸರ್ಕಾರದ ಮಹತ್ವಾ ಕಾಂಕ್ಷೆ ಯೋಜನೆ ಶಕ್ತಿ ಯೋಜನೆ (Shakthi Yojane) ಗೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ನಾಳೆ ಬೆಳಿಗ್ಗೆ 11ಕ್ಕೆ ಬಸ್ ಕಂಡಕ್ಟರ್ ಆಗಿ...