ಎರಡನೇ ದಿನವೂ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ಮುಂದುವರೆದಿದೆ. ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಪ್ರತಿಭಟನೆ ನಡೆದಿದೆ.. ಅಂಗನವಾಡಿ ಕೇಂದ್ರಗಳನ್ನು ಅನಿರ್ಧಿಷ್ಟ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ.. ಫ್ರೀಡಂ ಪಾರ್ಕ್ನಲ್ಲಿ ವಿವಿಧ ಬೇಡಿಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.. ಇನ್ನೂ ಪ್ರತಿಭಟನೆಯಲ್ಲಿ ಸುಮಾರು ಐದು ಸಾವಿರ ಅಂಗನವಾಡಿ ಕಾರ್ಯಕರ್ತರು ಭಾಗಿಯಾಗಿದ್ದಾರೆ..
ಅಂಗನವಾಡಿ ಕೇಂದ್ರಗಳಲ್ಲಿಯೇ LKG-UKG ನಡೆಸಬೇಕು.. NEP ಶಿಫಾರಸ್ಸುಗಳನ್ನು ಜಾರಿ ಮಾಡಬಾರದು. ಇಲಾಖೆಯ ಶಿಫಾರಸ್ಸಿನಂತೆ ರೂ.339.48 ಕೋಟಿ ಅನುದಾನದ ಬಿಡುಗಡೆ ಮಾಡ್ಬೇಕು. ಅಂಗನವಾಡಿ ನೌಕರರ ಮತ್ತು ಕೇಂದ್ರಗಳ ಮೇಲ್ವಿಚಾರಣೆಯನ್ನು ಗ್ರಾಮ ಪಂಚಾಯ್ತಿಗಳಿಗೆ ಕೊಡಬಾರದು. ನಿವೃತ್ತಿಯಾದ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಜೀವನ ನಡೆಸಲು ಪೆನ್ಶನ್ ಜಾರಿ ಮಾಡ್ಬೇಕು. ಮಿನಿ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸ್ಬೇಕು ಸೇರಿದಂತೆ ವಿವಿಧ ಬೇಡಿಕೆಗಳೊಂದಿಗೆ ಅಗನವಾಡಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ..