ಬೆಂಗಳೂರು : ನಗರದ ಡಿ.ಜೆ ಹಳ್ಳಿ, ಕೆ.ಜೆ ಹಳ್ಳಿಯಲ್ಲಿ ನಡೆದ ಗಲಭೆ ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ಘಟನೆಯನ್ನು ಬಹುಭಾಷಾ ನಟ ಪ್ರಕಾಶ್ ರಾಜ್ ಖಂಡಿಸಿದ್ದು, ಗೂಂಡಾಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಕಾಶ್ ರಾಜ್, ಬೆಂಗಳೂರಿನಲ್ಲಿ ನಡೆದ ಗಲಭೆ ಅನಾಗರಿಕವಾದದ್ದಾಗಿದೆ. ಈ ಧಾರ್ಮಿಕ ಮತಾಂಧತೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಕಾನೂನನ್ನು ಕೈಗೆ ತೆಗದುಕೊಂಡ ಪ್ರಚೋದರಕರು ಹಾಗೂ ಗೂಂಡಾಗಳಿಗೆ ಕಠಿಣ ಶಿಕ್ಷೆಯಾಗಬೇಕು. ಈ ಸಮಾಜ ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ.