ಹಿಂಬದಿಯಿಂದ ಕ್ಯಾಂಟರ್ ಗೆ ಡಿಕ್ಕಿ | ಇಬ್ಬರು ಸಾವು
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಕ್ಯಾಂಟರ್ ಗೆ ಹಿಂಬದಿಯಿಂದ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.
ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಲಗ್ಗೆರೆಯಿಂದ ಗೊರಗುಂಟೆಪಾಳ್ಯ ಕಡೆಗೆ ರಾಜಕುಮಾರ ಸಮಾಧಿ ಬಳಿ ಆಸ್ಸಾಂ ಮೂಲದ 25ರಿಂದ 30 ವರ್ಷದ ಕುಮಾರ್ ಲಿಂಬೂ ಮತ್ತು ಸುನಿಲ್ ಬಾಡಿಗೆ ಸ್ಕೂಟರ್ ಬುಕ್ ಮಾಡಿಕೊಂಡು ಬೈಕ್ ನಲ್ಲಿ ಹೋಗುತ್ತಿದ್ದರು.
bengaluru -road-accident – 2 death
ಈ ಸಮಯದಲ್ಲಿ ಇವರ ಮುಂದೆ ಲೋಡೆಡ್ ಕ್ಯಾಂಟರ್ ಒಂದು ಸಾಗುತ್ತಿತ್ತು. ಈ ವೇಳೆ ವೇಗವಾಗಿ ಬಂದ ಸ್ಕೂಟರ್ ಸವಾರರು ಹಿಂದಿನಿಂದ ಕ್ಯಾಂಟರ್ ಗೆ ಗುದ್ದಿದ್ದಾರೆ.
ಈ ಅಪಘಾತದಲ್ಲಿ ಸ್ಥಳದಲ್ಲೇ ಕುಮಾರ ಲಿಂಬು ಸಾವನ್ನಪ್ಪಿದ್ದಾರೆ. ಜೊತೆ ಇದ್ದ ಸುನಿಲ್ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧಿಸಿ ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.