ದುಷ್ಕರ್ಮಿಗಳು ಅಪ್ಘಾನಿಸ್ಥಾನ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿ ಮೊಬೈಲ್ ರಾಬರಿ ಮಾಡಿರುವ ಘಟನೆ ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಞಾನಜ್ಯೋತಿ ನಗರದಲ್ಲಿ ನಡೆದಿದೆ.
ಇಬ್ಬರು ವಿದ್ಯಾರ್ಥಿಗಳಿಗೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ. ಒಬ್ಬನಿಗೆ ಕುತ್ತಿಗೆಗೆ ಚಾಕುವಿನಿಂದ ಹಲ್ಲೆ ಮಾಡಲಾಗಿದ್ದು , ಮತ್ತೊಬ್ಬ ವಿದ್ಯಾರ್ಥಿ ಕೈಗೆ ಚಾಕುವಿನಿಂದ ಒಡೆದು ಮೊಬೈಲ್ ಕಸಿದು ಪರಾರಿಯಾಗಿದ್ದಾರೆ..
ಕಳೆದ ರಾತ್ರಿ 2 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಅಘ್ಪಾನ್ ವಿದ್ಯಾರ್ಥಿಗಳು ಬೆಂಗಳೂರು ವಿವಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಕಳೆದ ರಾತ್ರಿ ಮನೆ ಬಳಿ ನಡೆದುಕೊಂಡು ಹೋಗುವಾಗ ಘಟನೆ ನಡೆದಿದೆ. ಎರಡು ಬೈಕ್ ನಲ್ಲಿ ನಾಲ್ಕು ಮಂದಿ ಬಂದು ಮೊಬೈಲ್ ಕಸಿದು ಪರಾರಿಯಾಗಿದ್ದಾರೆ.
ಮೊಬೈಲ್ ರಾಬರಿ ಮಾಡುವ ವೇಳೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಸ್ನೇಹಿತರ ರೂಮ್ ಗೆ ವಾಪಸ್ ಬರುವಾಗ ಕಿಡಿಗೇಡಿಗಳು ಮೊಬೈಲ್ ರಾಬರಿ ಮಾಡಿದ್ದಾರೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು, ಜ್ಞಾನ ಭಾರತಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.